ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಎರಡು ದಿನಗಳ ಬಿಡುವಿನ ನಂತರ ಮಳೆ ಶುಕ್ರವಾರ ಮತ್ತೆ ಬಿರುಸಾಗಿದೆ.
ಮಡಿಕೇರಿ ನಗರದಲ್ಲಿ ಬಿರುಸಿನ ಮಳೆ ಬಿದ್ದಿತು. ನಾಪೋಕ್ಲು, ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಗಳಲ್ಲಿಯೂ ಮಧ್ಯಾಹ್ನದ ಬಳಿಕ ಧಾರಾಕಾರ ಮಳೆಯಾಯಿತು. ವಿರಾಜಪೇಟೆಯಲ್ಲಿ ಉತ್ತಮ ಹಾಗೂ ಗೋಣಿಕೊಪ್ಪಲು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗಿದೆ.
ಹೆಚ್ಚಿನ ಮಳೆ ಸುರಿದರೆ ಭೂಕುಸಿತ ಸಂಭವಿಸಬಹುದಾದ ಪ್ರದೇಶಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಯೋಧರು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾಧಾರಣ ಮಳೆ (ಮಂಗಳೂರು ವರದಿ): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶುಕ್ರವಾರ ಸಾಧಾರಣ ಮಳೆಯಾಗಿದೆ.
ಮಂಗಳೂರು ನಗರದಲ್ಲಿ ಬೆಳಿಗ್ಗೆಯಿಂದ ಬಿಟ್ಟು ಬಿಟ್ಟು ಮಳೆ ಸುರಿಯಿತು. ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಕಲ್ಮಡಕ, ಬಳಂಜ, ಉಡುಪಿ ಜಿಲ್ಲೆಯ ಹಳ್ಳಿಹೊಳೆಯಲ್ಲಿ ಉತ್ತಮ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.