ADVERTISEMENT

ಕೊಡಗಿನಲ್ಲಿ ಮತ್ತೆ ಮಳೆ, ಪ್ರವಾಹ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2022, 7:33 IST
Last Updated 29 ಆಗಸ್ಟ್ 2022, 7:33 IST
   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ ಧಾರಾಕಾರ ಮಳೆ ಸುರಿದಿದ್ದು ಮಡಿಕೇರಿ ಮಂಗಳೂರು ರಸ್ತೆಯ 10ನೇ ಮೈಲಿ ರಸ್ತೆಗೆ ಮಣ್ಣು ಕುಸಿದಿದೆ‌.

ಕೊಯನಾಡಿನ ಕಿಂಡಿ ಅಣೆಕಟ್ಟು ಬಳಿ ಮತ್ತೆ ಪಯಸ್ವಿನಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. 7 ಮನೆಗಳಿಗೆ ನೀರು ನುಗ್ಗಿದೆ. ಜನರು ಸಾಕಿದ್ದ ಹಂದಿ, ಕೋಳಿಗಳನ್ನು ಹೊಳೆ ನೀರು ಕೊಚ್ಚಿಕೊಂಡು ಹೋಗಿದೆ‌.

ಭಾಗಮಂಡಲ ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದೆ. ಭಾಗಮಂಡಲ ಮಡಿಕೇರಿ ರಸ್ತೆಯಲ್ಲಿ ನೀರು ಹರಿಯುತ್ತಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.