ADVERTISEMENT

ಕೊಡಗಿನಲ್ಲಿ ಧಾರಾಕಾರ ಮಳೆ, ಸ್ಥಳೀಯರಲ್ಲಿ ಮತ್ತೆ ಆತಂಕ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2018, 11:09 IST
Last Updated 8 ಅಕ್ಟೋಬರ್ 2018, 11:09 IST
ಮಡಿಕೇರಿಯಲ್ಲಿ ಸೋಮವಾರ ಮಧ್ಯಾಹ್ನ ಸುರಿದ ಮಳೆಯಲ್ಲಿ ಆಟೊ ಸಾಗಿದ್ದು ಹೀಗೆ
ಮಡಿಕೇರಿಯಲ್ಲಿ ಸೋಮವಾರ ಮಧ್ಯಾಹ್ನ ಸುರಿದ ಮಳೆಯಲ್ಲಿ ಆಟೊ ಸಾಗಿದ್ದು ಹೀಗೆ   

ಮಡಿಕೇರಿ: ಕೊಡಗಿನ ವಿವಿಧೆಡೆ ಸೋಮವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿಯಿತು. ನಾಪೋಕ್ಲು, ಭಾಗಮಂಡಲ, ತಲಕಾವೇರಿ ವ್ಯಾಪ್ತಿಯಲ್ಲೂ ಮಳೆ ಆರ್ಭಟಿಸಿತು.

ಆಗಸ್ಟ್‌ನಲ್ಲಿ ಸುರಿದಿದ್ದ ಮಳೆಯಿಂದ ಹಟ್ಟಿಹೊಳೆ, ಮಾದಾಪುರ, ತಂತಿಪಾಲ, ಕಾಂಡನಕೊಲ್ಲಿ, ಜೋಡುಪಾಲ, 2ನೇ ಮೊಣ್ಣಂಗೇರಿ ಸೇರಿದಂತೆ ಕೊಡಗಿನ 10 ಗ್ರಾಮಗಳಲ್ಲಿ ಭಾರೀ ಪ್ರಮಾಣದ ಭೂಕುಸಿತವಾಗಿತ್ತು. ಎರಡು ದಿನಗಳಿಂದ ಬಿಡುವು ನೀಡುತ್ತಾ ಧಾರಾಕಾರ ಮಳೆ ಸುರಿಯುತ್ತಿದ್ದು ಸ್ಥಳೀಯರಲ್ಲಿ ಮತ್ತೆ ಆತಂಕ ಮನೆ ಮಾಡಿದೆ.

ಭೂಕುಸಿತವಾಗಿದ್ದ ಮಡಿಕೇರಿ, ಸೋಮವಾರಪೇಟೆ ರಾಜ್ಯ ಹೆದ್ದಾರಿಯಲ್ಲಿ ತಾತ್ಕಾಲಿಕ ದುರಸ್ತಿ ಮಾಡಿ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಮತ್ತೆ ಮಳೆ ಆರಂಭವಾಗಿರುವ ಕಾರಣ ಈ ಮಾರ್ಗವನ್ನು ಬಂದ್‌ ಮಾಡಲಾಗಿದ್ದು, ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುತ್ತಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.