ADVERTISEMENT

ಭೂಮಿ ಗೆದ್ದರೆ ರಾಜ್ಯ, ಮನಸ್ಸು ಗೆದ್ದರೆ ಪೂಜ್ಯ ಭಾವನೆ: ಸಾಹಿತಿ ಉ.ರಾ.ನಾಗೇಶ್

ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯಲ್ಲಿ ಸಾಹಿತಿ ಉ.ರಾ.ನಾಗೇಶ್

​ಪ್ರಜಾವಾಣಿ ವಾರ್ತೆ
Published 2 ಜನವರಿ 2026, 6:23 IST
Last Updated 2 ಜನವರಿ 2026, 6:23 IST
ಮಡಿಕೇರಿಯ ಗಾಂಧಿ ಭವನದಲ್ಲಿ ಗುರುವಾರ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು
ಮಡಿಕೇರಿಯ ಗಾಂಧಿ ಭವನದಲ್ಲಿ ಗುರುವಾರ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು   

ಮಡಿಕೇರಿ: ಭೂಮಿ ಗೆದ್ದರೆ ರಾಜ್ಯ, ಮನಸ್ಸು ಗೆದ್ದರೆ ಪೂಜ್ಯ ಭಾವನೆಯಿಂದ ಬಹಳ ಕಾಲ ಉಳಿಯುತ್ತಾರೆ. ಆ ನಿಟ್ಟಿನಲ್ಲಿ ಅಮರಶಿಲ್ಪಿ ಜಕಣಾಚಾರಿ ಅವರು ಇಂದಿಗೂ ಸಹ ಸ್ಮರಣೀಯ ಎಂದು ಸಾಹಿತಿ ಉ.ರಾ.ನಾಗೇಶ್ ತಿಳಿಸಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಇಲ್ಲಿನ ಗಾಂಧಿ ಭವನದಲ್ಲಿ ಗುರುವಾರ ನಡೆದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಜಕಣಾಚಾರಿ ಅವರು ತುಮಕೂರು ಜಿಲ್ಲೆಯ ಕೈದಾಳ ಗ್ರಾಮದಲ್ಲಿ ಜನಿಸಿ ಸುಮಾರು 80 ವರ್ಷಗಳ ಕಾಲ ಬದುಕಿ 150 ಕ್ಕೂ ಹೆಚ್ಚು ದೇವಾಲಯಗಳನ್ನು ನಿರ್ಮಿಸಿ ಅಮರಶಿಲ್ಪಿ ಬಿರುದು ಹೊಂದಿದ್ದಾರೆ ಎಂದು ಅವರು ತಿಳಿಸಿ, ಜಕಣಾಚಾರಿ ಅವರ ಬದುಕಿನ ವೃತ್ತಾಂತ, ಸಾಧನೆಗಳನ್ನು ಕುರಿತು ವಿವರಿಸಿದರು.

ADVERTISEMENT

ವಿಶ್ವಕರ್ಮ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಎಸ್.ಜೆ.ದೇವದಾಸ್ ಮಾತನಾಡಿ, ‘ನಾಡಿನ ಶಿಲ್ಪಕಲೆಗೆ ಅಮರಶಿಲ್ಪಿ ಜಕಣಾಚಾರಿ ಅವರ ಕೊಡುಗೆ ಅಪಾರ. ಆ ನಿಟ್ಟಿನಲ್ಲಿ ಸಮಾಜಕ್ಕೆ ಒಳ್ಳೆಯ ಶಿಲ್ಪಕಲೆಗಳನ್ನು ನೀಡಿದ್ದು, ಇವರ ಏಕಾಗ್ರತೆ, ಸಾಧನೆ ಸದಾ ಸ್ಮರಣೀಯ’ ಎಂದರು.

ವಿಶ್ವಕರ್ಮ ಜಿಲ್ಲಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಿ.ಬಿ.ನಾಗರಾಜು ಮಾತನಾಡಿ, ‘ಬೇಲೂರು, ಹಳೇಬೀಡು ಸೇರಿದಂತೆ ಹಲವು ಶಿಲ್ಪಗಳನ್ನು ಕಣ್ಣು ಬಿಟ್ಟು ನೋಡಬೇಕು. ಕಿವಿ ತೆರೆದಿಟ್ಟು ಕೇಳಬೇಕು ಅಂತಹ ಅದ್ಭುತ ಕೆತ್ತನೆ ಮಾಡಿದ್ದಾರೆ’ ಎಂದು ತಿಳಿಸಿದರು.

ಮುಖಂಡರಾದ ವಿದ್ಯಾಲತಾ ವೆಂಕಟರಮಣ ಮಾತನಾಡಿ, ‘ವಿಶ್ವಕರ್ಮ ಸಮಾಜ, ಆರ್ಥಿಕವಾಗಿ ಮತ್ತಷ್ಟು ಸಬಲರಾಗಬೇಕು, ಶೈಕ್ಷಣಿಕವಾಗಿ ಮುಂದೆ ಬರಬೇಕು’ ಎಂದು ಹೇಳಿದರು.

ಮುಖಂಡರಾದ ಪ್ರಕಾಶ್ ಆಚಾರ್ಯ, ಅಶೋಕ್, ದಾಮೋದರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ, ಭವ್ಯಾ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.