
ಮಡಿಕೇರಿ: ಮೇಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಕೇರಿ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅರಿವು ಕಾರ್ಯಕ್ರಮ ನಡೆಯಿತು.
ಮಕ್ಕಳಿಗೆ ಛದ್ಮವೇಷ ಮತ್ತು ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಘೋಷಣೆಗಳನ್ನು ಬರೆಸಿ ಮಕ್ಕಳಿಂದ ಗ್ರಾಮಸ್ಥರಿಗೆ ಸ್ವಚ್ಛತೆ ಹಾಗೂ ಪರಿಸರ ರಕ್ಷಣೆ ಬಗ್ಗೆ ಮಾಹಿತಿ ಕೊಡಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ರಕ್ಷಿತ್, ತಾಲ್ಲೂಕು ಹಿಂದುಳಿದ ವರ್ಗದ ವಿಸ್ತರಣಾಧಿಕಾರಿ ಶ್ರೀಕಾಂತ್, ತಾಲ್ಲೂಕು ಪಂಚಾಯಿತಿ ಸಾಮಾಜಿಕ ಲೆಕ್ಕ ಪರಿಶೋಧನಾಧಿಕಾರಿ ಸುಂದರೇಶ್, ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್, ಅರಣ್ಯ ಸಂರಕ್ಷಣಾಧಿಕಾರಿ ಪ್ರೇಮ್‍ನಾಥ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಮತಾ, ಸದಸ್ಯರಾದ ಪುಷ್ಪ, ಮುತ್ತಮ್ಮ, ಅನಿಫ್, ದಿನೇಶ್, ಸುಶೀಲಾವತಿ, ಕೀರ್ತನ್, ಅಂಗನವಾಡಿ ಕಾರ್ಯಕರ್ತೆ ಹೇಮಲತಾ, ರಮ್ಯಾ ಸಹಾಯಕಿ ಬೇಬಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.