ಸೋಮವಾರಪೇಟೆ: ಕಾಳಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಿದ್ದ 42 ಕ್ವಿಂಟಲ್ ‘ಅನ್ನಭಾಗ್ಯ’ ಯೋಜನೆಯ ಅಕ್ಕಿಯನ್ನು ಇಲ್ಲಿನ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಸೋಮವಾರ ವಶಪಡಿಸಿಕೊಂಡಿದ್ದಾರೆ.
ಕೊಣನೂರಿನ ಇದ್ರಿಸ್ ಎಂಬಾತ ಅಕ್ಕಿಯನ್ನು ಖರೀದಿಸಿ ಮಾರಾಟ ಮಾಡಲು ಕೊಂಡೊಯ್ಯುವ ಸಂದರ್ಭ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಾಹನದೊಂದಿಗೆ ಅಕ್ಕಿಯನ್ನು ವಶಪಡಿಸಿಕೊಂಡರು.
‘ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ₹1,42,970 ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದ್ದು, ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಆಹಾರ ಇಲಾಖೆ ನಿರೀಕ್ಷಕಿ ಯಶಸ್ವಿನಿ ತಿಳಿಸಿದರು.
ದಾಳಿ ಸಂದರ್ಭ ಪೊಲೀಸ್ ಎಸ್ಐ ಗೋಪಾಲ್, ಗ್ರಾಮ ಆಡಳಿತಾಧಿಕಾರಿ ನಾಗೇಂದ್ರ, ಆಹಾರ ಇಲಾಖೆ ಕಚೇರಿ ಸಿಬ್ಬಂದಿ ವಿನೋದ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.