ಮಡಿಕೇರಿ: ಇಲ್ಲಿ ಸೋಮವಾರ ನೂರಾರು ಜನರನ್ನು ಸೇರಿಸಿ ಮೆರವಣಿಗೆ ನಡೆಸಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಪಿ.ಅಪ್ಪಚ್ಚು ರಂಜನ್ ನಾಮಪತ್ರ ಸಲ್ಲಿಸಿದರು.
ನಂತರ ಮಾತನಾಡಿದ ಅವರು, ಪ್ರಸ್ತುತ ಕೊಡಗಿನಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಭಾರಿ ಅಂತರದಿಂದ ಗೆಲುವು ಸಾಧಿಸುವುದು ನಿಶ್ಚಿತ.
ಜೀವಿಜಯ ಅವರು ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡದೇ ಇರುವುದರಿಂದ ನನ್ನ ಗೆಲುವು ಸುಲಭವಾಗಲಿದೆ ಎಂದರು.
ಜಗದೀಶ್ ಶೆಟ್ಟರ್ ಅವರು ಬಿಜೆಪಿ ಬಿಟ್ಟು ಹೋಗಬಾರದಿತ್ತು. ಎಲ್ಲ ಕೊಟ್ಟ ಪಕ್ಷಕ್ಕೆ ದ್ರೋಹ ಬಗೆಯಬಾರದಿತ್ತು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.