ಮಡಿಕೇರಿ: ಭಾರತೀಯ ವಾಯುಪಡೆಯಿಂದ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ 50ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅಥವಾ ಡಿಪ್ಲೋಮಾ ವಿಭಾಗದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಷ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‍ಸ್ಟ್ರುಮೆಂಟ್ ಟೆಕ್ನಾಲಜಿ, ಇನ್ಪಾರ್ಮೇಶನ್ ಟೆಕ್ನಾಲಜಿಯಲ್ಲಿ ಶೇ 50ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಇಲ್ಲವೇ 2 ವರ್ಷದ ವೃತ್ತಿಪರ ಕೋರ್ಸ್‍ಗಳಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳಲ್ಲಿ ವ್ಯಾಸಂಗ ಮಾಡಿ ಶೇ 50ರಷ್ಟು ಅಥವಾ ಯಾವುದೇ ಪಿ.ಯು.ಸಿ ವಿಭಾಗದಲ್ಲಿ ಶೇ.50ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.
ಅಭ್ಯರ್ಥಿಯು 3 ಜುಲೈ 2004ರಿಂದ 3 ಜನವರಿ 2008ರ ನಡುವೆ ಜನಿಸಿರಬೇಕು. ಅರ್ಜಿ ಶುಲ್ಕ ₹ 550 ಆಗಿದೆ. ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ವಿವರ ಮತ್ತು ಸೂಚನೆಗಳಿಗೆ ವೆಬ್‍ಸೈಟ್ https://agnipathvayu.cdac.in ನೋಡಬಹುದು.
ವೆಬ್‍ಸೈಟ್‍ನಲ್ಲಿ ಜುಲೈ 8ರಿಂದ 28ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ರೇಖಾ ಗಣಪತಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.