ಕುಶಾಲನಗರ: ಕೇಂದ್ರ ಸರ್ಕಾರದ ಯೋಜನೆಗಳಾದ ಜಲಜೀವನ್ ಮಿಷನ್, ಸ್ವಚ್ಛ ಭಾರತ ಮಿಷನ್ ಗ್ರಾಮೀಣ ಯೋಜನೆಗಳ ಪ್ರಗತಿಯ ಕುರಿತು ಮೌಲ್ಯಮಾಪನ ಮಾಡಲು ನೀತಿ ಆಯೋಗದ ತಂಡದ ಸದಸ್ಯರು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದರು.
ನೀತಿ ಆಯೋಗದ ಅಧಿಕಾರಿ ನಿತಿನ್ ಅವರ ನೇತೃತ್ವದಲ್ಲಿ ದಾಖಲಾತಿಗಳ ಪರಿಶೀಲನೆ ನಡೆಯಿತು.
ಯೋಜನೆಗಳ ಘಟಕವಾರು ಭೌತಿಕ ಮತ್ತು ಆರ್ಥಿಕ ಪ್ರಗತಿಯ ವಿವರಗಳನ್ನು ಪರಿಶೀಲಿಸಿ, ಸ್ವಚ್ಛ– ಸಂಕೀರ್ಣ ಘಟಕಗಳ ಮೂಲಕ ಕಸ ವಿಲೇವಾರಿ ಮಾಡುವ ವಿಧಾನ, ಗ್ರಾಮೀಣ ಕುಡಿಯುವ ನೀರು ಪೂರೈಕೆ ಕ್ರಮ ಮತ್ತು ನಿಯಮಿತ ನೀರಿನ ಗುಣಮಟ್ಟ ತಪಾಸಣೆ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ನಂತರ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಸದಸ್ಯರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಸ್ಥಳೀಯ ಸಂಸ್ಥೆಗಳು ತಳಮಟ್ಟದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಮ್ಯ, ಉಪಾಧ್ಯಕ್ಷ ಪ್ರವೀಣ್ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮೇಶ್, ಸ್ವಚ್ಛ ಭಾರತ್ ಜಿಲ್ಲಾ ನೋಡಲ್ ಅಧಿಕಾರಿ ಹರ್ಷಿತ, ಗ್ರಾಮೀಣ ಕುಡಿಯುವ ನೀರು ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವೀರೇಂದ್ರ ಮತ್ತು ಜಲ ಜೀವನ್ ಮತ್ತು ಸ್ವಚ್ಛ ಭಾರತ ಘಟಕಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿಯ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.