ADVERTISEMENT

24ರಂದು ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2026, 3:19 IST
Last Updated 19 ಫೆಬ್ರುವರಿ 2026, 3:19 IST
ಅಕಾಡೆಮಿ ಲಾಂಛನ
ಅಕಾಡೆಮಿ ಲಾಂಛನ   

ನಾಪೋಕ್ಲು: ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣವು ಇದೇ 24ರಂದು ಮಂಗಳವಾರ ಸುಳ್ಯದ ಕೆ.ವಿ.ಜಿ ಸಾಹಿತ್ಯ ಭವನ ರಂಗ ಮಂದಿರದಲ್ಲಿ ನಡೆಯಲಿದೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಸುಳ್ಯದ ನೆಹರು ಮೆಮೊರಿಯಲ್ ಕಾಲೇಜು ಸುಳ್ಯ ಸಹಯೋಗದಲ್ಲಿ ಕಾಲೇಜಿನ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ. 

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅವರ ಅಧ್ಯಕ್ಷತೆಯಲ್ಲಿ ಜರುಗಲಿರುವ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್‌‌ನ ಅಧ್ಯಕ್ಷ ಡಾ.ಕೆ.ವಿ. ಚಿದಾನಂದ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಒಎಲ್‌ಇ(ರಿ) ಸುಳ್ಯ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಭಾಗವಹಿಸಲಿದ್ದಾರೆ. ನೆಹರೂ ಮೆಮೊರಿಯಲ್ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ., ನೆಹರೂ ಮೆಮೊರಿಯಲ್ ಪಿ.ಯು ಕಾಲೇಜಿನ ಪ್ರಾಂಶುಪಾಲ ಮಿಥಾಲಿ ರೈ ಪಿ., ಎನ್.ಎಂ.ಸಿ. ಸುಳ್ಯದ ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷ ಕೆ.ಟಿ. ವಿಶ್ವನಾಥ ಉಪಸ್ಥಿತರಿರುವರು.

ADVERTISEMENT

ಪ್ರಥಮ ಅಧಿವೇಶನದ ಭಾಷಾ ವಿಚಾರ ಸಂಕಿರಣದಲ್ಲಿ ‘ಪ್ರಾದೇಶಿಕ ಭಾಷೆಗಳು ಎದುರಿಸುತ್ತಿರುವ ಸವಾಲುಗಳು’ ಎಂಬ ವಿಷಯದ ಬಗ್ಗೆ ಡಾ. ಧನಂಜಯ ಕುಂಬ್ಳೆ ಹಾಗೂ ‘ಜಾಗತಿಕರಣ ಮತ್ತು ಸಾಂಸ್ಕೃತಿಕ ಪಲ್ಲಟಗಳು’ ಎಂಬ ವಿಷಯದ ಬಗ್ಗೆ ಡಾ. ನರೇಂದ್ರ ರೈ ದೇರ್ಲ ಅವರು ಪ್ರಬಂಧ ಮಂಡಿಸಲಿದ್ದಾರೆ. ಹಿರಿಯ ವಿದ್ವಾಂಸ ಡಾ.ಕೆ. ಚಿನ್ನಪ್ಪ ಗೌಡ ಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ.

ದ್ವಿತೀಯ ಅಧಿವೇಶನದಲ್ಲಿ ಅರೆಭಾಷೆ ವಿಚಾರ ಸಂಕಿರಣ ನಡೆಯಲಿದೆ. ‘ಅರೆಭಾಷೆಯ ಅನನ್ಯತೆಗೆ’ ಎಂಬ ವಿಷಯದ ಬಗ್ಗೆ  ಕೆ.ಆರ್. ಗಂಗಾಧರ ಹಾಗೂ ‘ಅರೆಭಾಷೆಯ ಪ್ರಾದೇಶಿಕ ವಿಭಿನ್ನತೆಗ’ ವಿಷಯದ ಕುರಿತು ಡಾ. ಪುರುಷೋತ್ತಮ ಕರಂಗಲ್ಲು  ಮಾತನಾಡಲಿದ್ದಾರೆ. ಗೋಷ್ಠಿಯ ಅಧ್ಯಕ್ಷತೆಯನ್ನು ಬೆಂಗಳೂರಿನ ಸಾಹಿತಿ ಪ್ರೊ.ಕೆ.ಇ. ರಾಧಾಕೃಷ್ಣ ವಹಿಸಲಿದ್ದಾರೆ.

ಮಧ್ಯಾಹ್ನ ನಂತರದ ಅವಧಿಯಲ್ಲಿ ಅರೆಭಾಷೆ ಸಂಸ್ಕೃತಿ ವಿಚಾರ ಸಂಕಿರಣ ನಡೆಯಲಿದೆ. ‘ಅರೆಭಾಷೆನ ಮೊದ್ದೆ ಪದ್ಧತಿಗಲ್ಲಿ ಬದಲಾವಣೆಗ” ಎಂಬ ವಿಷಯದ ಕುರಿತು ದೊಡ್ಡಣ ಬರೆಮೇಲು, ‘ಸಿದ್ದವೇಶ-ಅರೆಭಾಷಿಕರ ಜಾನಪದ ನೃತ್ಯ’, ವಿಷಯದ ಬಗ್ಗೆ ಜಯಪ್ರಕಾಶ ಕುಕ್ಕೆಟ್ಟಿ, ‘ಅರೆಭಾಷಿಕರ ದೈವರಾಧಾನೆ’ ಬಗ್ಗೆ ಡಾ. ಕರುಣಾಕರ ನಿಡಿಂಜಿ ಹಾಗೂ ‘ಕೊಡಗಿನ ಅರೆಭಾಷಿಕರ ಹಬ್ಬ ಹರಿದಿನ’ಗಳ ಬಗ್ಗೆ ಡಾ. ದಯಾನಂದ ಕೂಡಕಂಡಿ ಅವರು ಉಪನ್ಯಾಸ ನೀಡಲಿದ್ದಾರೆ.

ಗೋಷ್ಠಿಯ ಅಧ್ಯಕ್ಷತೆಯನ್ನು ವಾಗ್ನಿ ಪಟ್ಟಡ ಶಿವಕುಮಾರ್ ವಹಿಸಲಿದ್ದಾರೆ. ಸಾಹಿತಿಗಳು, ಚಿಂತಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಪದವಿ ಕಾಲೇಜಿನ ಉಪಾನ್ಯಾಸಕರಿಗೆ ಒಒಡಿ ಸೌಲಭ್ಯ ನೀಡಲಾಗಿದೆ. ಚಂದ್ರಶೇಖರ ಪೇರಾಲ್ ಕೆಲಸ ಕಾರ್ಯಕ್ರಮದ ಸದಸ್ಯ ಸಂಚಾಲಕರಾಗಿದ್ದಾರೆ. ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.