ADVERTISEMENT

ಮಡಿಕೇರಿ, ಕುಶಾಲನಗರದಲ್ಲಿ ಪ್ರತಿಭಟನಾಕಾರರ ಬಂಧ‌ನ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 5:12 IST
Last Updated 28 ಸೆಪ್ಟೆಂಬರ್ 2020, 5:12 IST
   
""

ಮಡಿಕೇರಿ: ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ರಸ್ತೆತಡೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು‌ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಶಾಲನಗರದ ಕೊಪ್ಪ ಗೇಟ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಹಾಗೂ ಕಾರ್ಮಿಕರನ್ನು ಬಂಧಿಸಲಾಗಿದೆ.

ಅದಕ್ಕೂ ಮೊದಲು ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ರಸ್ತೆತಡೆ ನಡೆಸಿದರು.

ಜಿಲ್ಲೆಯ ವಿವಿಧೆಡೆ ಅಂಗಡಿಗಳು ಬಾಗಿಲು ತೆರೆದು ಎಂದಿನಂತೆ ವಹಿವಾಟು ನಡೆಸುತ್ತಿವೆ. ಕೆಎಸ್ಆರ್‌ಟಿಸಿ ಬಸ್, ಆಟೊ ಹಾಗೂ ಖಾಸಗಿ ಬಸ್ ಓಡಾಟ ನಡೆಸುತ್ತಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.