ADVERTISEMENT

ಕೊಡ್ಲಿಪೇಟೆ ರುಕ್ಮಿಣಿ ಪಾಂಡುರಂಗ ದೇವಸ್ಥಾನದಲ್ಲಿ ಆಷಾಢ ಏಕಾದಶಿ ಪೂಜೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2024, 6:15 IST
Last Updated 19 ಜುಲೈ 2024, 6:15 IST
ಕೊಡ್ಲಿಪೇಟೆ ರುಕ್ಮಿಣಿ ಪಾಂಡುರಂಗ ದೇವಸ್ಥಾನದಲ್ಲಿ ಆಷಾಢ ಏಕಾದಶಿ ಪ್ರಯುಕ್ತ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.
ಕೊಡ್ಲಿಪೇಟೆ ರುಕ್ಮಿಣಿ ಪಾಂಡುರಂಗ ದೇವಸ್ಥಾನದಲ್ಲಿ ಆಷಾಢ ಏಕಾದಶಿ ಪ್ರಯುಕ್ತ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.   

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ರುಕ್ಮಿಣಿ ಪಾಂಡುರಂಗ ದೇವಸ್ಥಾನದಲ್ಲಿ ಇಲ್ಲಿನ ನಾಮದೇವ ಸಿಂಪಿ ಸಮಾಜದ ವತಿಯಿಂದ ಪ್ರತಿ ವರ್ಷದಂತೆ ನಡೆಸುವ ಆಷಾಢ ಏಕಾದಶಿ ವಿಶೇಷ ಪೂಜೆಯನ್ನು ಬುಧವಾರ ನೆರವೇರಿಸಲಾಯಿತು.

ಆಷಾಢ ಏಕಾದಶಿ ಪ್ರಯುಕ್ತ ದೇವಸ್ಥಾನದಲ್ಲಿ ಬುಧವಾರ ಬೆಳಿಗ್ಗೆ ದೇವರಿಗೆ ಅಭಿಷೇಕ, ಪುಷ್ಪಾಲಂಕಾರ, ಮಹಾಮಂಗಳಾರತಿ ನಂತರ  ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ನಡೆಯಿತು.

ಸಂಜೆ 6 ಗಂಟೆಯಿಂದ ದೇವರಿಗೆ ವಿಶೇಷ ಪೂಜಾ ಕಾರ್ಯವನ್ನು ನೆರವೇರಿಸಲಾಯಿತು. ತದನಂತರ, ರಾತ್ರಿತವರೆಗೂ ದೇವಸ್ಥಾನದಲ್ಲಿ ದೇವರ ಉತ್ಸವವನ್ನು ನಡೆಸಲಾಯಿತು. ಭಕ್ತಾದಿಗಳಿಗೆ ಪ್ರಸಾದ ವಿನಿಯೋದೊಂದಿಗೆ ಪೂಜಾ ಕಾರ್ಯವು ಸಂಪನ್ನಗೊಂಡಿತು. ನೂರಾರು ಭಕ್ತರು, ಸಿಂಪಿ ಸಮಾಜದ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಡಿದ್ದರು.

ADVERTISEMENT
ಕೊಡ್ಲಿಪೇಟೆ ರುಕ್ಮಿಣಿ ಪಾಂಡುರಂಗ ದೇವಸ್ಥಾನದಲ್ಲಿ ಆಷಾಢ ಏಕಾದಶಿ ಪ್ರಯುಕ್ತ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ಈ ವೇಳೆ ಹೆಚ್ಚಿನ  ಭಕ್ತಾಧಿಗಳು ಪಾಲ್ಗೊಂಡಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.