
ಬಂಧನ
ನಾಪೋಕ್ಲು (ಕೊಡಗು ಜಿಲ್ಲೆ): ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪಟ್ಟಣದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ ಕುರಿತು ಪ್ರಚಾರ ನಡೆಸುತ್ತಿದ್ದ ಗೌತಮ್ ಎಂಬುವರ ಮೇಲೆ ಐವರ ತಂಡವು ಹಲ್ಲೆ ನಡೆಸಿದೆ ಎಂದು ಆರೋಪಿಸಿ ಹಿಂದೂ ಸಂಗಮ ಆಯೋಜನಾ ಸಮಿತಿ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಇಲ್ಲಿಗೆ ಸಮೀಪದ ಬಲ್ಲಮಾವಟಿಯಲ್ಲಿ ಫೆ. 28ರಂದು ನಡೆಯಲಿರುವ ಕಾರ್ಯಕ್ರಮದ ಅಂಗವಾಗಿ ವಾಹನದಲ್ಲಿ ಪ್ರಚಾರ ನಡೆದಿತ್ತು. ಆ ವೇಳೆ ಕಾರಿನಲ್ಲಿ ಬಂದ ಸಿದ್ದಿಕ್ ಹಾಗೂ ಇತರರು ಹಲ್ಲೆ ನಡೆಸಿದರು. ಗೌತಮ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದರು.
‘ಆರೋಪಿಗಳನ್ನು ಬಂಧಿಸುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ರಸ್ತೆ ತಡೆ ನಡೆಸಿದರು. ಈ ವೇಳೆ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಯಿತು. ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದರು. ಸ್ಥಳದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.