ಹಲ್ಲೆ
(ಪ್ರಾತಿನಿಧಿಕ ಚಿತ್ರ)
ಸೋಮವಾರಪೇಟೆ: ಜಿಲ್ಲೆಯ ಕಟ್ಟೆಮಾಡು ಮೃತ್ಯುಂಜಯ ದೇವಾಲಯದ ವಾರ್ಷಿಕ ಪೂಜೋತ್ಸವದಲ್ಲಿ ಕೊಡವ ಸಾಂಪ್ರದಾಯಿಕ ಉಡುಗೆ ಧರಿಸಿ ಬಂದ ಕೊಡವರ ಮೇಲೆ ಹಲ್ಲೆ ನಡೆಸಿರುವುದನ್ನು ಸೋಮವಾರಪೇಟೆ ಕೊಡವ ಸಮಾಜ ತೀವ್ರವಾಗಿ ಖಂಡಿಸುತ್ತದೆ ಎಂದು ಸಮಾಜದ ಅಧ್ಯಕ್ಷ ಮಾಳೇಟಿರ ಬಿ.ಅಭಿಮನ್ಯುಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇವರನ್ನು ಪೂಜಿಸಲು ನಮ್ಮ ಸಾಂಪ್ರದಾಯಿಕ ಉಡುಗೆ ತೊಡುಗೆಗಳನ್ನು ತೊಡಲು ಯಾರ ಅಪ್ಪಣೆಯೂ ಕೊಡವ ಮೂಲನಿವಾಸಿಗಳಿಗೆ ಬೇಕಿಲ್ಲ. ನಮ್ಮ ನೆಲದಲ್ಲಿ ನಮ್ಮನ್ನೇ ಅವಮಾನ ಪಡಿಸುತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ. ಕೊಡವರ ಆಚಾರ ವಿಚಾರ, ಸಂಪ್ರದಾಯ, ಉಡುಗೆ ತೊಡುಗೆ, ದೇವರ ಕೈಂಕಾರ್ಯಗಳ ಭಾಗವಹಿಸುವುದನ್ನು ತಡೆಯಲು ಪ್ರಯತ್ನಪಟ್ಟರೆ, ಸೂಕ್ತ ರೀತಿಯಲ್ಲಿ ಉತ್ತರ ನೀಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.