ಸಿದ್ದಾಪುರ: ಆಟೊ ಚಾಲಕರು ಕಾನೂನು ಪಾಲಿಸಬೇಕು. ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಮನವಿ ಮಾಡಿದರು.
ಇಲ್ಲಿನ ಚರ್ಚ್ ಹಾಲ್ ಸಭಾಂಗಣದಲ್ಲಿ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಾಪುರ ಹಾಗೂ ನೆಲ್ಯಹುದಿಕೇರಿ ವ್ಯಾಪ್ತಿಯ ಆಟೊ ಚಾಲಕರ ಸಭೆಯಲ್ಲಿ ಅವರು ಮಾತನಾಡಿದರು.
ಆಟೊ ಚಲಾಯಿಸುವಾಗ ಸೂಕ್ತ ದಾಖಲೆ ಇಟ್ಟುಕೊಳ್ಳಬೇಕು. ಅಪಘಾತ ತಡೆಯಲು ಕ್ರಮ ವಹಿಸಬೇಕು ಎಂದರು.
ಅಪರಾಧ ವಿಭಾಗದ ಠಾಣಾಧಿಕಾರಿ ಶಿವಣ್ಣ, ಆಟೊ ಚಾಲಕರ ಸಂಘದ ಪದಾಧಿಕಾರಿಗಳು, ಚಾಲಕರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.