ADVERTISEMENT

ಕೊಡಗು ವಿವಿ ಸಿಂಡಿಕೇಟ್ ಸದಸ್ಯರಾಗಿ ಅಯ್ಯಂಡ್ರ ಲಿಖಿತಾ ನೇಮಕ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2025, 7:40 IST
Last Updated 12 ಆಗಸ್ಟ್ 2025, 7:40 IST
ಲಿಖಿತ
ಲಿಖಿತ   

ಕುಶಾಲನಗರ: ಕೊಡಗು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯರಾಗಿ ಇಲ್ಲಿನ ಎಂಜಿಎಂ ಪದವಿ ಕಾಲೇಜಿನ ಪ್ರಾಂಶುಪಾಲೆ ಅಯ್ಯಂಡ್ರ ಟಿ.ಎ.ಲಿಖಿತ
ನೇಮಕಗೊಂಡಿದ್ದಾರೆ.

2025–2026ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿಗೆ ಹಾಗೂ ಮುಂದಿನ ಆದೇಶದ ವರೆಗೆ ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ನಾಮ ನಿರ್ದೇಶನ ಮಾಡಲಾಗಿದೆ ಎಂದು ಕೊಡಗು ವಿವಿ ಕುಲಸಚಿವ ಡಾ.ಎಂ.ಸುರೇಶ್ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ. 13 ವರ್ಷಗಳ ಬೋಧನಾ ಅನುಭವ ಹೊಂದಿರುವ, ಸಿಂಡಿಕೇಟ್ ಸದಸ್ಯರಾಗಿ ನೇಮಕವಾಗಿರುವ ಅಯ್ಯಂಡ್ರ ಲಿಖಿತ ಅವರನ್ನು ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಹಾಗೂ ಪದವಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT