ಮಡಿಕೇರಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೊಡಗು ಸೇರಿದಂತೆ ಮಲೆನಾಡಿನ ರೈತರು ಅತೀವ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹಾಗಾಗಿ, ಸರ್ಕಾರ ತುರ್ತಾಗಿ ವಿಶೇಷ ಕಾಳಜಿ ವಹಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರಿಗೆ ಪತ್ರ ಬರೆದಿರುವ ಅವರು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆಯೂ ಆಗ್ರಹಿಸಿದ್ದಾರೆ.
ಅತಿ ಮಳೆಯಿಂದ ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕೆಲವೆಡೆ ಕಾಫಿಗೆ ಕೊಳೆರೋಗ ಬಂದಿದೆ. ಕೂಡಲೇ ಸಮೀಕ್ಷೆ ನಡೆಸಿದ ವೈಜ್ಞಾನಿಕ ಪರಿಹಾರ ವಿತರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.