ADVERTISEMENT

ರಾಷ್ಟ್ರಮಟ್ಟದ ಕಾರ್ಯಾಗಾರಕ್ಕೆ ಭಾಗಮಂಡಲ ಗ್ರಾಮ ಪಂಚಾಯಿತಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2022, 5:19 IST
Last Updated 16 ಸೆಪ್ಟೆಂಬರ್ 2022, 5:19 IST

ಮಡಿಕೇರಿ: ಮಹಾರಾಷ್ಟ್ರದ ಪುಣೆಯಲ್ಲಿ ಕೇಂದ್ರ ಜಲಶಕ್ತಿ ಸಚಿವಾಲಯ, ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮತ್ತು ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಇವರ ಸಹಯೋಗದಲ್ಲಿ ಸೆ. 22 ರಿಂದ 3 ದಿನಗಳ ಕಾಲ ನಡೆಯಲಿರುವ ಸ್ಥಳೀಯವಾಗಿ ಸುಸ್ಥಿರ ಅಭಿವೃದ್ಧಿಯ ಗುರಿಗಳು ಕುರಿತ 3 ದಿನಗಳ ಕಾರ್ಯಾಗಾರಕ್ಕೆತಾಲ್ಲೂಕಿನ ಭಾಗಮಂಡಲ ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ.

ದೇಶದಲ್ಲಿಯೇ ಗುಜರಾತ್, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಉತ್ತರಪ್ರದೇಶ ರಾಜ್ಯದ 5 ಗ್ರಾಮ ಪಂಚಾಯಿತಿಗಳು ಮಾತ್ರ ಈ ಕಾರ್ಯಾಗಾರದಲ್ಲಿ ಭಾಗಿಯಾಗುತ್ತಿವೆ.

ಭಾಗಮಂಡಲ ಗ್ರಾಮ ಪಂಚಾಯಿತಿಯಲ್ಲಿ ನಿರ್ಮಿಸಲಾಗಿರುವ ಮಲತ್ಯಾಜ್ಯ ಸಂಸ್ಕರಣಾ ಘಟಕ ಕುರಿತಂತೆ ಮಾಹಿತಿ ಮತ್ತು ಕಾರ್ಯವಿಧಾನವನ್ನು ಕಾರ್ಯಾಗಾರದಲ್ಲಿ ಪ್ರಸ್ತುತಪಡಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರಸಿಂಗ್ ಮೀನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.