ಗೋಣಿಕೊಪ್ಪಲು: ‘ಕಂದಾಯ ಇಲಾಖೆಯಲ್ಲಿ ನಿಯಮ ಬದಲಾವಣೆಯಿಂದ ಬಗರ್ ಹುಕುಂ ಅರ್ಜಿ ಅಂಗೀಕಾರಕ್ಕೆ ಎದುರಾಗಿದ್ದ ತಾಂತ್ರಿಕ ಸಮಸ್ಯೆ ನಿವಾರಣೆಯಾಗಿದೆ’ ಎಂದು ಬಗರ್ ಹುಕುಂ ಸಕ್ರಮೀಕರಣ ಸಮಿತಿ ತಾಲ್ಲೂಕು ಅಧ್ಯಕ್ಷ ಲಾಲಾ ಅಪ್ಪಣ್ಣ ಹೇಳಿದರು.
ಪೊನ್ನಂಪೇಟೆ ತಾಲ್ಲೂಕು ಬಗರ್ ಹುಕುಂ ಸಕ್ರಮೀಕರಣ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ‘ಇನ್ನು ಮುಂದೆ ತಿಂಗಳಿಗೊಮ್ಮೆ ಸಭೆ ಕರೆದು ಅರ್ಹ ಫಲಾನುಭವಿಗಳ ಅರ್ಜಿಗಳ ಅಂಗೀಕಾರಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
23 ಅರ್ಜಿಗಳನ್ನು ಅಂಗೀಕರಿಸಲಾಯಿತು.
ತಹಶೀಲ್ದಾರ್ ಮೋಹನ್ ಕುಮಾರ್, ಬಗರ್ ಹುಕುಂ ಸಮಿತಿ ಸದಸ್ಯ ತೆರೆಸಾ ವಿಕ್ಟರ್, ಸುಬ್ರಮಣಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.