ADVERTISEMENT

ಬಲಮುರಿ: ಮಂತ್ರಾಕ್ಷತೆ ವಿತರಣೆ ಅಭಿಯಾನ

​ಪ್ರಜಾವಾಣಿ ವಾರ್ತೆ
Published 3 ಜನವರಿ 2024, 16:35 IST
Last Updated 3 ಜನವರಿ 2024, 16:35 IST
ನಾಪೋಕ್ಲು ಸಮೀಪದ ಬಲಮುರಿಯ ಶ್ರೀ ಅಗಸ್ಟೇಶ್ವರ ದೇವಸ್ಥಾನದಲ್ಲಿ ಪವಿತ್ರ ಮಂತ್ರಾಕ್ಷತೆಯನ್ನು ಪೂಜಾ ವಿಧಿ ವಿಧಾನಗಳೊಂದಿಗೆ ಗ್ರಾಮದ ಪ್ರಮುಖರಿಗೆ ಮಂಗಳವಾರ ಹಸ್ತಾಂತರಿಸಲಾಯಿತು.
ನಾಪೋಕ್ಲು ಸಮೀಪದ ಬಲಮುರಿಯ ಶ್ರೀ ಅಗಸ್ಟೇಶ್ವರ ದೇವಸ್ಥಾನದಲ್ಲಿ ಪವಿತ್ರ ಮಂತ್ರಾಕ್ಷತೆಯನ್ನು ಪೂಜಾ ವಿಧಿ ವಿಧಾನಗಳೊಂದಿಗೆ ಗ್ರಾಮದ ಪ್ರಮುಖರಿಗೆ ಮಂಗಳವಾರ ಹಸ್ತಾಂತರಿಸಲಾಯಿತು.   

ಪ್ರಜಾವಾಣಿ ವಾರ್ತೆ

ನಾಪೋಕ್ಲು: ಮನೆ ಮನೆಗೆ ಪವಿತ್ರ ಮಂತ್ರಾಕ್ಷತೆ ವಿತರಣಾ ಅಭಿಯಾನದ ಅಂಗವಾಗಿ ಅಯೋಧ್ಯೆಯ ಶ್ರೀರಾಮ ಮಂದಿರದಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆಯನ್ನು ಮಂಗಳವಾರ ಬಲಮುರಿ  ಗ್ರಾಮದ ಪ್ರಮುಖರಿಗೆ ಹಸ್ತಾಂತರಿಸಲಾಯಿತು.

ಗ್ರಾಮದ ಅಗಸ್ತ್ಯೇಶ್ವರ ದೇವಸ್ಥಾನದಲ್ಲಿ ಪೂಜಾ ವಿಧಿಗಳೊಂದಿಗೆ ಪಾಣಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಾಡೆಯಂಡ ಕಟ್ಟಿ ಕುಶಾಲಪ್ಪ , ಶಕ್ತಿಕೇಂದ್ರದ ಅಧ್ಯಕ್ಷ ಅಪ್ಪನೆರವಂಡ ರಾಜ, ಬಲಮುರಿ ಗ್ರಾಮ ಪಂಚಾಯತಿ ಸದಸ್ಯರಾದ ಬೊಳ್ಳಚೆಟ್ಟಿರ ಪ್ರಕಾಶ್ ಕಾಳಪ್ಪ, ಕಾರ್ಯಕರ್ತರಾದ ಆಂಗಿರ ಸಂತೋಷ್ ಮಾದಪ್ಪ , ಗುಡ್ಡೇರ ಲಕ್ಷು, ಬಿದ್ದಂಡ ಉಷಾದೇವಮ್ಮ, ಮಣಿಕಂಠ , ಬಿದ್ದಂಡ ಪ್ರಥ, ಕುಂದನ ದಯಾನಂದ ಪಾಲ್ಗೊಂಡಿದ್ದರು.

ADVERTISEMENT

ಗ್ರಾಮದ ಮನೆಗಳಿಗೆ ತೆರಳಿ ಕುಟುಂಬ ಸದಸ್ಯರಿಗೆ ಪವಿತ್ರ ಮಂತ್ರಾಕ್ಷತೆಯನ್ನು ಶ್ರದ್ಧಾ ಭಕ್ತಿಯಿಂದ ವಿತರಿಸಲಾಯಿತು. ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.