ಕುಶಾಲನಗರ: ತಾಲ್ಲೂಕಿನ ಶಿರಂಗಾಲ ಗ್ರಾಮದಲ್ಲಿ ಬಸವ ಸೇವಾ ಸಮಿತಿಯಿಂದ ಬುಧವಾರ ಬಸವ ಜಯಂತಿ ಅಂಗವಾಗಿ ಆಕರ್ಷಕ ಮೆರವಣಿಗೆ ನಡೆಸಲಾಯಿತು.
ಗ್ರಾಮದಲ್ಲಿ ಸಂಜೆ ಅಲಂಕೃತ ಬೆಳ್ಳಿ ರಥದಲ್ಲಿ ಬಸವೇಶ್ವರ ಭಾವಚಿತ್ರವನ್ನಿಟ್ಟು ಗ್ರಾಮದ ವಿವಿಧೆಡೆ ಮೆರವಣಿಗೆ ಮೂಲಕ ನಡೆಸಲಾಯಿತು. ಅಲಂಕೃತಗೊಳಿಸಿದ್ದ ಹೋರಿಯ ಮೆರವಣಿಗೆ ಗಮನ ಸೆಳೆಯಿತು.
ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ‘12ನೇ ಶತಮಾನದ ಕ್ರಾಂತಿಕಾರಿ ಬಸವಣ್ಣನವರು ವಚನಗಳ ಮೂಲಕ ಸಮಾಜದಲ್ಲಿ ಅಸಮಾನತೆ, ಅಸ್ಪೃಶ್ಯತೆ, ಕಂದಾಚಾರ, ಮೂಢನಂಬಿಕೆಗಳ ವಿರುದ್ಧ ಜನಜಾಗೃತಿ ಮೂಡಿಸಿದ್ದರು. ಪ್ರತಿಯೊಬ್ಬರೂ ಬಸವಣ್ಣನವರ ತತ್ವ, ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜದ ಪ್ರಗತಿಗೆ ಶ್ರಮಿಸಬೇಕು’ ಎಂದು ಸಲಹೆ ನೀಡಿದರು.
ಶಿರಂಗಾಲ ಗ್ರಾಮ ದೇವಾಲಯ ಸಮಿತಿಯ ಕಾರ್ಯದರ್ಶಿ ಎಂಎಸ್.ಗಣೇಶ್ ಶೋಭಾಯಾತ್ರೆಗೆ ಚಾಲನೆ ನೀಡಿದರು.
ಗ್ರಾಮ ದೇವಾಲಯ ಸಮಿತಿಯ ಅಧ್ಯಕ್ಷ ಎಸ್.ಎಸ್.ಚಂದ್ರಶೇಖರ್, ಗ್ರಾಮ ಬಸವ ಸಮಿತಿ ಅಧ್ಯಕ್ಷ ಎಸ್.ಜೆ.ಉಮೇಶ್, ಕಾರ್ಯದರ್ಶಿ ಎನ್.ಎಸ್.ಜಯಣ್ಣ, ಪ್ರಮುಖರಾದ ಎಸ್.ಎಚ್. ರಾಜಪ್ಪ, ಎಂ.ಎಸ್.ಶಿವಾನಂದ, ಎಸ್.ಪಿ.ಪರಮೇಶ್, ಎಸ್.ಆರ್.ಶಿವಲಿಂಗ, ಸಿದ್ದಲಿಂಗಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.