ADVERTISEMENT

ಮಡಿಕೇರಿ: ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2025, 5:54 IST
Last Updated 16 ನವೆಂಬರ್ 2025, 5:54 IST
<div class="paragraphs"><p>ಪ್ರಾತಿನಿಧಿಕ ಪತ್ರ</p></div>

ಪ್ರಾತಿನಿಧಿಕ ಪತ್ರ

   

ಮಡಿಕೇರಿ: ಪ್ರಸಕ್ತ 2025-26ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳನ್ನು ಅನುಷ್ಠಾನಗೂಳಿಸುತ್ತಿರುವ ರೈತರು ಅರ್ಜಿ ಸಲ್ಲಿಸಬಹುದು. ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಆಯ್ಕೆಯಾದ ಜಿಲ್ಲೆಯ 10 ರೈತರಿಗೆ ತಲಾ ₹ 25 ಸಾವಿರ ಹಾಗೂ ತಾಲ್ಲೂಕು ಮಟ್ಟದ ಪ್ರಶಸ್ತಿಯನ್ನು ಆಯಾಯ ತಾಲ್ಲೂಕಿನ 5 ರೈತರಿಗೆ ತಲಾ ₹ 10 ಸಾವಿರ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ತೀರ್ಮಾನದಂತೆ ವಿತರಿಸಲಾಗುತ್ತದೆ.

ADVERTISEMENT

ಪ್ರಶಸ್ತಿಗಾಗಿ ರೈತರು ಭಾಗವಹಿಸಬಹುದಾದ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಾದ ಕೃಷಿಯಲ್ಲಿ ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ದಿ, ವ್ಯೆಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಹಸಿರು ಮನೆ, ಕಸಿ ಅಭಿವೃದ್ದಿ ಸಸ್ಯಕಾಶಿ ಇತ್ಯಾದಿ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಮತ್ತಿತರ ಸಾಕಾಣಿಕೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಅರ್ಹ ಆಸಕ್ತ ರೈತರು ಅರ್ಜಿಗಳನ್ನು ಆಯಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ದಿನಾಂಕ ನ. 29ರ ಸಂಜೆ 5 ಗಂಟೆಯೊಳಗಾಗಿ ತಲುಪಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.