ಸೋಮವಾರಪೇಟೆ: ತಾಲ್ಲೂಕಿನ ಭುವಂಗಾಲ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಕೃಷಿ ಫಸಲು ನಷ್ಟವಾಗುತ್ತಿರುವುದಾಗಿ ಗ್ರಾಮಸ್ಥರು ದೂರಿದ್ದಾರೆ.
ಗ್ರಾಮದ ಕೆ.ಎಸ್. ವಿವೇಕ್ ಎಂಬುವವರ ನಾಲ್ಕು ಎಕರೆ ತೆಂಗಿನ ತೋಟದಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಎರಡು ಕಾಡಾನೆಗಳು ಬಂದು ನಾಲ್ಕು ವರ್ಷದ ಹತ್ತಕ್ಕೂ ಹೆಚ್ಚು ತೆಂಗಿನ ಗಿಡಗಳು ಮತ್ತು ಮರಗೆಣಸು ಬೆಳೆಯನ್ನು ನಾಶಪಡಿಸಿರುತ್ತವೆ. ಹಲವು ಭಾರಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಅರಣ್ಯ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಆನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಸಬೇಕು ಮತ್ತು ನಷ್ಟವಾದ ಬೆಳೆಗೆ ಸೂಕ್ತ ಪರಿಹಾರ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.