ADVERTISEMENT

ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಬುಧವಾರ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 1 ಜೂನ್ 2022, 17:31 IST
Last Updated 1 ಜೂನ್ 2022, 17:31 IST

ಮಡಿಕೇರಿ: ಶನಿವಾರಸಂತೆ ಸಮೀಪದ ಆಲೂರು ಸಿದ್ದಾಪುರ ರಸ್ತೆಯಲ್ಲಿ ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಬುಧವಾರ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಧಳದಲ್ಲೇ ಸೋಮವಾರಪೇಟೆಯ ಬೈಕ್ ಸವಾರ ರಘು (30) ಮೃತಪಟ್ಟಿದ್ದಾರೆ.

ಪರಿಹಾರ ನೀಡುವವರೆಗೂ ಮೃತದೇಹ ತೆಗೆಯಲು ಬಿಡುವುದಿಲ್ಲ ಎಂದು ಸಂಬಂಧಿಕರು ಪಟ್ಟು ಹಿಡಿದರು.

ಪರಿಹಾರ ಸಿಗುವ ಭರವಸೆ ದೊರೆತ ನಂತರ ಪ್ರತಿಭಟನೆ ವಾಪಸ್ ಪಡೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.