ಮಡಿಕೇರಿ: ‘ಕಾಂಗ್ರೆಸ್ ಬಗ್ಗೆ ಮಾತನಾಡಲು ಬಿಜೆಪಿ ನಾಯಕರು ಅಯೋಗ್ಯರು’ ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ, ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಪ್ರತಿಪಾದಿಸಿದರು.
‘ಕಾಂಗ್ರೆಸ್ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸುತ್ತಿದ್ದಂತೆಯೇ, ಗೃಹಸಚಿವ ಅಮಿತ್ ಶಾ ಮೇಲೆ ಅವರೆಲ್ಲಿ ಪ್ರಭಾವ ಬೀರುತ್ತಾರೋ ಎಂಬ ಪ್ರಲ್ಹಾದ ಜೋಶಿ, ಜಗದೀಶ್ ಶೆಟ್ಟರ್ ಕೂಡ ಮಾತನಾಡುತ್ತಾರೆ. ಇವರನ್ನು ಬಸನಗೌಡ ಪಾಟೀಲ ಯತ್ನಾಳ್ ಟೀಕಿಸುತ್ತಾರೆ. ಆರ್‌ಎಸ್‌ಎಸ್ ಎಲ್ಲರನ್ನೂ ಕರೆಸುತ್ತದೆ. ಇದಕ್ಕಿಂತ ಛೀಮಾರಿ ಅವರಿಗೆ ಬೇಕಾ? ಅವರಿಗೆ ನಮ್ಮ ಬಗ್ಗೆ ಮಾತನಾಡಲು ನಾಚಿಕೆಯೂ ಇಲ್ಲ’ ಎಂದು ಶನಿವಾರ ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸುಳ್ಳು ಹೇಳಿಕೊಂಡು ಜನರ ದಾರಿ ತಪ್ಪಿಸುವ ಈ ನಾಯಕರು ಕೇಂದ್ರದ ಮಲತಾಯಿ ಧೋರಣೆ ಬಗ್ಗೆ ಮಾತನಾಡುವುದಿಲ್ಲ’ ಎಂದರು.
‘ಸಂಸ್ಕಾರ, ಸಂಸ್ಕೃತಿ ಬಗ್ಗೆ ಮಾತನಾಡುವ ಬಿಜೆಪಿಯವರು ತಮ್ಮ ಪಕ್ಷದ ಶಾಸಕ ಮುನಿರತ್ನ ಅವರ ಮಾತುಗಳ ಬಗ್ಗೆ ಪ್ರತಿಕ್ರಿಯಿಸಬೇಕು. ಮುನಿರತ್ನರ ಮಾತುಗಳು ಆ ಪಕ್ಷದ ಸಂಸ್ಕೃತಿಯನ್ನು ತೋರಿಸುತ್ತದೆ’ ಎಂದೂ ಟೀಕಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.