
ಪ್ರಜಾವಾಣಿ ವಾರ್ತೆ
ಎನ್.ಎಸ್.ಭೋಸರಾಜು
ಮಡಿಕೇರಿ: ಈಗ ರಾಜ್ಯದಲ್ಲಿರುವ ಬಿಜೆಪಿ ನಾಯಕರಿಗೆ ಪ್ರಬುದ್ದತೆ ಇದೆಯೆ? ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಭೋಸರಾಜು ಪ್ರಶ್ನಿಸಿದರು.
ಹಿಂದೆ ಇದ್ದ ಬಿಜೆಪಿ ನಾಯಕರ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ, ಈಗ ಇರುವ ವಿಜಯೇಂದ್ರ, ಆರ್.ಅಶೋಕ್ ಅವರಿಗೆ ಪ್ರಬುದ್ದತೆಯೆ ಇಲ್ಲ. ನಿತ್ಯ ಏನಾದರೂ ಒಂದು ಹೇಳುತ್ತಲೇ ಇರುತ್ತಾರೆ. ಅವರ ಮಾತುಗಳನ್ನು ಜನರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಒಂದು ಪಾದಯಾತ್ರೆ ನಡೆಸಲೂ ಹೈಕಮಾಂಡ್‌ನ ಅನುಮತಿ ಪಡೆಯಬೇಕಾದ ಸ್ಥಿತಿ ಬಿಜೆಪಿಯಲ್ಲಿದೆ. ಅವರು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಿದ್ದಾರೆ. ಕೇಂದ್ರದಿಂದ ಬರಬೇಕಾದ ಅನುದಾನದ ಕುರಿತು ಮಾತೇ ಆಡುವುದಿಲ್ಲ. ಅದನ್ನು ಬಿಟ್ಟು ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.