ADVERTISEMENT

ಕೊಡಗು: ಬಿಜೆಪಿ ಓಬಿಸಿ ಘಟಕದ ಅಧ್ಯಕ್ಷ ಅಪ್ರು ರವೀಂದ್ರ ಕಾಂಗ್ರೆಸ್ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2025, 9:04 IST
Last Updated 22 ಸೆಪ್ಟೆಂಬರ್ 2025, 9:04 IST
   

ಮಡಿಕೇರಿ: ಬಿಜೆಪಿಯ ಕೊಡಗು ಜಿಲ್ಲಾ ಘಟಕದ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಅಪ್ರು ರವೀಂದ್ರ ಹಾಗೂ ಇತರ ಕಾರ್ಯಕರ್ತರು ಸೋಮವಾರ ಇಲ್ಲಿನ ಬಾಲಭವನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು‌.

ಈ ಹಿಂದೆ ಕಾಂಗ್ರೆಸ್ ನಲ್ಲಿದ್ದ ಅಪ್ರು ರವೀಂದ್ರ ನಂತರ ಬಿಜೆಪಿಗೆ ಸೇರಿ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾಗಿದ್ದರು. ಈಗ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಗೆ ಮರು ಸೇರ್ಪಡೆಗೊಂಡಿದ್ದಾರೆ‌.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.