ADVERTISEMENT

ಜೀವ ಉಳಿವಿಗೆ ರಕ್ತದಾನ ನೆರವು: ಕರುಂಬಯ್ಯ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2025, 6:21 IST
Last Updated 11 ಏಪ್ರಿಲ್ 2025, 6:21 IST
ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಕ್ತದಾನ ಶಿಬಿರ
ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಕ್ತದಾನ ಶಿಬಿರ   

ಸುಂಟಿಕೊಪ್ಪ: ‘ರಕ್ತದಾನ ಮೂಲಕ ಒಂದು ಜೀವ ಬದುಕಿಸಲು ಸಹಾಯ ಮಾಡಬಹುದು’ ಎಂದು ಮಡಿಕೇರಿ ರಕ್ತ ನಿಧಿ ಕೇಂದ್ರ ಮುಖ್ಯಸ್ಥ ಕರುಂಬಯ್ಯ ಹೇಳಿದರು.

ಇಲ್ಲಿನ ಹಾರಂಗಿ ರಸ್ತೆಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್, ವಿದ್ಯಾರ್ಥಿ ಸಂಘ, ದೈಹಿಕ ಶಿಕ್ಷಣ ವಿಭಾಗ, ಎನ್‌ಎಸ್‌‌ಎಸ್, ಹಳೇ ವಿದ್ಯಾರ್ಥಿಗಳ ಸಂಘ, ಪಿ.ಟಿ.ಎ, ಕುಶಾಲನಗರ ವಾಸವಿ ಯುವಜನ ಚಾರಿಟಬಲ್ ಟ್ರಸ್ಟ್ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಭಾಗಿತ್ವದಲ್ಲಿ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ರಕ್ತನಿಧಿ ಕೇಂದ್ರದಲ್ಲಿ ರಕ್ತದ ಕೊರತೆ ಇದೆ‌. ಇಂತಹ ಶಿಬಿರದ ಮೂಲಕ ರೋಗಿಗಳ ತುರ್ತು ಚಿಕಿತ್ಸೆಗೆ ಅವಕಾಶವಾಗಲಿದೆ. ಯುವ ಜನರು ಕೆಟ್ಟ ಚಟಗಳಿಗೆ ದಾಸರಾಗದೆ, ಒಳ್ಳೆಯ ಆಹಾರ ಸೇವಿಸಿ ಆರೋಗ್ಯವಂತರಾಗಿ ಇನ್ನೊಂದು ಜೀವ ಉಳಿಸುವ ಕಾರ್ಯದಲ್ಲಿ ಕೈ ಜೋಡಿಸಬೇಕು ಎಂದರು.

ADVERTISEMENT

ಕಾರ್ಯಕ್ರಮ ಉದ್ಘಾಟಿಸಿ  ಕುಶಾಲನಗರ ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷ ಎಸ್.ಕೆ.ಸತೀಶ್ ಮಾತನಾಡಿ, ರಕ್ತದಾನ ಮಹಾದಾನ. ಆರೋಗ್ಯವಂತ ವ್ಯಕ್ತಿಯು ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹದು‌. ಕೆಲವರಿಗೆ ರಕ್ತದಾನ ಮಾಡುವ ವಿಚಾರದಲ್ಲಿ ಗೊಂದಲ ಮತ್ತು ಭಯವಿದೆ. ರಕ್ತ ನೀಡಿದ ‌ಕೆಲವೇ ದಿನದಲ್ಲಿ ಪರಿಶುದ್ಧವಾದ ರಕ್ತ ಸೇರ್ಪಡೆಗೊಳ್ಳಲಿದೆ‌. ಮದ್ಯಪಾನ, ಧೂಮಪಾನದಿಂದ‌ ದೂರವಿದ್ದು, ಆರೋಗ್ಯದ ಕಡೆ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು.

ಸಹ ಪ್ರಾಧ್ಯಾಪಕಿ ಮಧುಶ್ರೀ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಉಪನ್ಯಾಸಕರಾದ ಎಸ್‌‌.ಎಂ‌.ನಟರಾಜು, ಕಚೇರಿ ಅಧೀಕ್ಷಕರಾದ ಮೋಹನ್ ಕುಮಾರ್ ಹಾಗೂ ಕುಶಾಲನಗರ ಸರ್ಕಾರಿ ಪದವಿ ಕಾಲೇಜು, ಹಳೇ ವಿದ್ಯಾರ್ಥಿಗಳು ಸೇರಿದಂತೆ 35 ಮಂದಿ ರಕ್ತದಾನ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪುಟ್ಟರಾಜು ವಹಿಸಿದ್ದರು‌. ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ರಾಕೇಶ್, ಕಾಲೇಜಿನ ಯುವ ರೆಡ್ ಕ್ರಾಸ್ ಸಂಸ್ಥೆ ಸಂಚಾಲಕ ರಮೇಶ್ ಚಂದ್ರ, ಎನ್ಎಸ್ಎಸ್ ಅಧಿಕಾರಿಗಳಾದ ಕುಮಾರ್, ಸುನಿಲ್ ಕುಮಾರ್ ಇದ್ದರು.

ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಮಡಿಕೇರಿ ಸರ್ಕಾರಿ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ಮುಖ್ಯಸ್ಥ ಕರುಂಬಯ್ಯ ಮಾತನಾಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.