ಸೋಮವಾರಪೇಟೆ: ಕಳೆದ 5 ದಿನಗಳ ಹಿಂದೆ ನಾಪತ್ತೆಯಾಗಿದ್ದ ಸಂಪತ್ ಅಲಿಯಾಸ್ ಶಂಭು (45) ಎಂಬುವವರ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಮಠದ ಸಮೀಪದ ನಿರ್ಜನ ಪ್ರದೇಶದಲ್ಲಿ ಬುಧವಾರ ಪತ್ತೆಯಾಗಿದೆ.
ಮೂಲತಃ ಸೋಮವಾರಪೇಟೆ ಕಕ್ಕೆಹೊಳೆ ಜಂಕ್ಷನ್‌ನವರಾದ ಇವರು ಚಾಲನೆ ಮಾಡುತ್ತಿದ್ದ ಕಾರು ಶನಿವಾರ ಹಾಸನದ ಯಸಳೂರು ಸಮೀಪದ ಪತ್ತೆಯಾಗಿತ್ತು. ಕಾರಿನಲ್ಲಿ ರಕ್ತದ ಕಲೆಗಳು ಕಂಡು ಬಂದಿದ್ದವು.
ಈ ಕಾರು ಕುಶಾಲನಗರದ ಜಾನ್ ಎಂಬುವವರಿಗೆ ಸೇರಿದ್ದಾಗಿತ್ತು. ಕಳೆದ ಶುಕ್ರವಾರ ಇವರ ಕಾರನ್ನು ಮೃತ ಸಂಪತ್ ತೆಗೆದುಕೊಂಡು ಹೋಗಿದ್ದು, ನಂತರ ನಾಪತ್ತೆಯಾಗಿದ್ದರು. ಈ ಕುರಿತು ನಾಪತ್ತೆ ದೂರು ದಾಖಲಾಗಿತ್ತು. ಈಗ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶವ ಪತ್ತೆಯಾದ ಸ್ಥಳಕ್ಕೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆರಳಚ್ಚು ತಜ್ಞರ ತಂಡ ಹಾಗೂ ಶ್ವಾನದಳವೂ ಪರಿಶೀಲನೆ ನಡೆಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.