ಮೋಕ್ಷಿತ್
ಶನಿವಾರಸಂತೆ (ಕೊಡಗು ಜಿಲ್ಲೆ): ಇಲ್ಲಿಗೆ ಸಮೀಪದ ಆಲೂರುಸಿದ್ದಾಪುರ ಗ್ರಾಮದಲ್ಲಿ ಬುಧವಾರ ಆಟವಾಡುತ್ತಿದ್ದ ಬಾಲಕ ಮೋಕ್ಷಿತ್ (8)ಗೆ ಬೀದಿನಾಯಿಯೊಂದು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ. ಚಿಕಿತ್ಸೆಗಾಗಿ ಬಾಲಕನನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಆಲೂರುಸಿದ್ದಾಪುರ ಗ್ರಾಮ ಪಂಚಾಯಿತಿ ಪಕ್ಕದಲ್ಲಿ ಬಾಲಕ ಆಟವಾಡುತ್ತಿದ್ದಾಗ ನಾಯಿಯೊಂದು ದಾಳಿ ನಡೆಸಿ, ಕಾಲು, ಕೈ ತೋಳು, ಕುತ್ತಿಗೆ, ಮುಖ, ಕಣ್ಣು ಭಾಗಕ್ಕೆಲ್ಲ ಕಚ್ಚಿದೆ. ಇದರಿಂದ ಚೀರಾಡುತ್ತಿದ್ದ ಬಾಲಕನನ್ನು ಸ್ಥಳೀಯರು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ಕರೆದೋಯ್ದರು. ಪರಿಸ್ಥಿತಿ ಗಂಭೀರವಾಗಿದ್ದರಿಂದ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.