ADVERTISEMENT

‘ಕೆಳವರ್ಗದವರಿಗೆ ಪ್ರಧಾನ ಸ್ಥಾನ ನೀಡಿದವರು ಬ್ರಹ್ಮರ್ಷಿ ನಾರಾಯಣ ಗುರುಗಳು'

ಕೊಡಗು ಜಿಲ್ಲಾ ಬಿಲ್ಲವ ಸಮಾಜದ ಅಧ್ಯಕ್ಷ ರಘು ಆನಂದ ಪ್ರತಿಪಾದನೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2024, 5:25 IST
Last Updated 22 ಆಗಸ್ಟ್ 2024, 5:25 IST
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಓಂಕಾರ ಸದನ ಸಭಾಂಗಣದಲ್ಲಿ ನಡೆದ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಲ್ಲವ ಸಮಾಜದ ಅಧ್ಯಕ್ಷ ರಘು ಆನಂದ ಮಾತನಾಡಿದರು
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಓಂಕಾರ ಸದನ ಸಭಾಂಗಣದಲ್ಲಿ ನಡೆದ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಲ್ಲವ ಸಮಾಜದ ಅಧ್ಯಕ್ಷ ರಘು ಆನಂದ ಮಾತನಾಡಿದರು   

ಮಡಿಕೇರಿ: ಕೆಳವರ್ಗದ ಸಮುದಾಯವರಿಗೆ ಪ್ರಧಾನ ಸ್ಥಾನ ನೀಡಿದ ಕೀರ್ತಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರುಗಳಿಗೆ ಸಲ್ಲುತ್ತದೆ ಎಂದು ಜಿಲ್ಲಾ ಬಿಲ್ಲವ ಸಮಾಜದ ಅಧ್ಯಕ್ಷ ರಘು ಆನಂದ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಓಂಕಾರ ಸದನ ಸಭಾಂಗಣದಲ್ಲಿ ನಡೆದ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬ್ರಹ್ಮರ್ಷಿ ಶ್ರೀ ನಾರಾಯಣ ಗುರುಗಳು ಯಾವುದೇ ಸಮುದಾಯಕ್ಕೆ ಮೀಸಲಿರದೆ ವಿಶ್ವಕ್ಕೆ ಹಿಂದೂ ಸಮಾಜದ ಸಂದೇಶ ಸಾರಿದವರು ಎಂದು ಅವರು ಶ್ಲಾಘಿಸಿದರು.

ADVERTISEMENT

ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಮಾತನಾಡಿ, ‘ಮಾನವೀಯತೆ ಮಲಗಿ, ಮೂಢನಂಬಿಕೆಗಳು ಎದ್ದಿದ್ದ ಕಾಲದಲ್ಲಿ ಮಹಾನ್ ಮಾನವತಾವಾದಿಯಾಗಿ ಸಮಾಜದ ಕಣ್ಣರಳಿಸಿದ ದಾರ್ಶನಿಕ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು’ ಎಂದು ಅವರು ಹೇಳಿದರು.

ಅವರು ಜಾತಿ, ದ್ವೇಷದ ಗೋಡೆಯನ್ನು ಒಡೆದು ಎಲ್ಲರಲ್ಲಿಯೂ ಭ್ರಾತೃತ್ವ ಮತ್ತು ಸಮಾನತೆಯ ಪರಿಕಲ್ಪನೆಯನ್ನು ಬಿತ್ತಿದರು. ಅವರ ಜೀವನ ಮತ್ತು ಹೋರಾಟ ಆದರ್ಶಪೂರ್ಣವಾದದ್ದು, ಎಲ್ಲರಲ್ಲೂ ಮಾನವೀಯತೆಯ ಸದಾಶಯವನ್ನು ಬೆಳೆಸುವಲ್ಲಿ ಗುರುವಿನ ಪಾತ್ರ ಮಹತ್ವದ್ದು ಎಂದು ಅವರು ತಿಳಿಸಿದರು.

ಇರುವವನು ಒಬ್ಬನೇ ಪರಮಾತ್ಮ, ಒಂದೇ ತತ್ವ, ಒಂದೇ ಸತ್ಯ. ಎಲ್ಲವೂ ಒಂದೇ ಅಂದಮೇಲೆ ಭೇದ-ಭಾವವಿಲ್ಲ, ಮೇಲು ಕೀಳಿಲ್ಲ. ಎಲ್ಲರಲ್ಲಿರುವ ಪರಮಾತ್ಮ ಒಬ್ಬನೇ ಅಂದಮೇಲೆ, ಅಲ್ಲಿ ಮೇಲು ಕೀಳೆಂಬ ಮಾತೆಲ್ಲಿ ಎಂದು ಪ್ರಶ್ನಿಸಿದವರು ಎಂದು ಲೋಕೇಶ್ ಸಾಗರ್ ತಿಳಿಸಿದರು.

ಜನರಲ್ಲಿ ಸ್ವಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶಿಕ್ಷಣಕ್ಕೆ ಮಹತ್ವ ನೀಡಿದ ಅವರು, ನೂರಾರು, ಸಾವಿರಾರು ಜನರಿಗೆ ಶಿಕ್ಷಣ ಕೊಡಿಸಿದರು. ಎಲ್ಲ ವರ್ಗದ ಜನರು ಒಟ್ಟಿಗೆ ಕಲಿಯಬೇಕು ಎಂದು ಪ್ರೇರೇಪಿಸಿದರು. ಮಹಿಳೆಯರ ಶಿಕ್ಷಣಕ್ಕೆ ಒತ್ತು ನೀಡಿದರು. ಸೇವಾ ಟ್ರಸ್ಟ್, ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳನ್ನು ತೆರೆದರು. ದೇವಸ್ಥಾನಗಳಿಗೂ ಎಲ್ಲಾ ಜಾತಿ ಹಾಗೂ ವರ್ಗದ ಜನರಿಗೆ ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸಿದರು ಎಂದರು.

 ಕನ್ನಡ ಮತ್ತ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಕ ಕುಮಾರ, ಮಣಜೂರು ಮಂಜುನಾಥ, ಮುಖಂಡರಾದ ಟಿ.ಕೆ.ಪಾಂಡುರಂಗ, ಬಾಲಕೃಷ್ಣ, ಲೀಲಾವತಿ, ಆನಂದ ಬಾಲಕೃಷ್ಣ, ಮದೆ ಮೋಹನ್ ಭಾಗವಹಿಸಿದ್ದರು. ಕಾರ್ಯಕ್ರಮದ ಮೊದಲಿಗೆ ವಿದ್ವಾನ್ ಬಿ.ಸಿ.ಶಂಕರಯ್ಯ ಅವರು ನಾಡಗೀತೆ ಹಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.