ಅಪಘಾತಕ್ಕೀಡಾಗಿರುವ ಕಾರು
ಶನಿವಾರಸಂತೆ: ಇಲ್ಲಿಗೆ ಸಮೀಪದ ಕೊಡ್ಲಿಪೇಟೆ- ಸಕಲೇಶಪುರ ರಾಜ್ಯ ಹೆದ್ದಾರಿಯ ಶಾಂತಪುರ ಸೇತುವೆ ಬಳಿ ಶನಿವಾರ ಬೆಳಿಗ್ಗೆ ಕೆಎಸ್ಆರ್‌ಟಿಸಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಗಾಯಗೊಂಡಿದ್ದು, ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಸಕಲೇಶಪುರ ತಾಲ್ಲೂಕಿನ ಹೊಸಕೋಟೆ ಹೋಬಳಿಯ ಕಾಗನೂರು ಗ್ರಾಮದ ಅಪ್ಪನಿ ಗೌಡ ಎಂಬುವರ ಕಾರು ಚಿಕ್ಕಮಂಗಳೂರು ಕಡೆಯಿಂದ ಮಡಿಕೇರಿಗೆ ಬರುತ್ತಿದ್ದಾಗ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾಗಿದೆ.
ಆಂಬುಲೆನ್ಸ್ ಸಾಕಷ್ಟು ತಡವಾಗಿ ಬಂದಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಾಯಾಳುಗಳನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.