ADVERTISEMENT

ಮಡಿಕೇರಿಯಿಂದ ಮಂಗಳೂರಿಗೆ ಬಸ್‌ ಸಂಚಾರ ಆರಂಭ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2018, 18:17 IST
Last Updated 18 ನವೆಂಬರ್ 2018, 18:17 IST

ಮಡಿಕೇರಿ: ರಾಷ್ಟ್ರೀಯ ಹೆದ್ದಾರಿ– 275ರ ಮಡಿಕೇರಿ, ತಾಳತ್‍ಮನೆ, ಸಂಪಾಜೆ ಮಾರ್ಗವಾಗಿ ಮಂಗಳೂರಿಗೆ ತೆರಳಲು ಎಲ್ಲಾ ಮಾದರಿಯ ಬಸ್‌ ಸಂಚಾರಕ್ಕೆ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಆದೇಶಿಸಿದ್ದಾರೆ.

ಆಗಸ್ಟ್‌ನಲ್ಲಿ ಉಂಟಾಗಿದ್ದ ಭೂಕುಸಿತದ ಬಳಿಕ ಈ ಮಾರ್ಗದಲ್ಲಿ ಒಂದು ತಿಂಗಳು ವಾಹನ ಸಂಚಾರ ಬಂದ್‌ ಆಗಿತ್ತು. ತಾತ್ಕಾಲಿಕವಾಗಿ ರಸ್ತೆ ದುರಸ್ತಿಯಾದ ನಂತರ ಮಡಿಕೇರಿಯಿಂದ ಜೋಡುಪಾಲದ ತನಕ ಮಿನಿ ಬಸ್‌ಗಳು ಮಾತ್ರ ಸಂಚರಿಸುತ್ತಿದ್ದವು. ಅಲ್ಲಿಂದ ಬೇರೆ ಬಸ್‌ಗಳಲ್ಲಿ ಪ್ರಯಾಣಿಕರು ಸಂಪಾಜೆ, ಸುಳ್ಯ, ಪುತ್ತೂರು ಹಾಗೂ ಮಂಗಳೂರಿಗೆ ತೆರಳಬೇಕಿತ್ತು. ಭಾನುವಾರ ಮಡಿಕೇರಿಯಿಂದಲೇ ನೇರ ಬಸ್ ಸೇವೆ ಆರಂಭಗೊಂಡಿದೆ.

ಸರಕು ಸಾಗಣೆ ವಾಹನ ಹೊರತುಪಡಿಸಿ ಅಡುಗೆ ಅನಿಲ, ಇಂಧನ, ಹಾಲು ಪೂರೈಕೆ, ಸರ್ಕಾರಿ ಕೆಲಸಕ್ಕೆ ಬಳಸುವ ವಾಹನ, ಶಾಲಾ- ಕಾಲೇಜು ವಾಹನ, ಕಾರು, ಜೀಪು, ಬೈಕ್‌, ವ್ಯಾನ್, ಮ್ಯಾಕ್ಸಿಕ್ಯಾಬ್, ಟೆಂಪೊ, ಸಾಮಾನ್ಯ ಬಸ್‍, ಐರಾವತ, ಖಾಸಗಿ ಲಕ್ಷುರಿ ಬಸ್‍ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.