ADVERTISEMENT

ನಾಪೋಕ್ಲು | ಕಾರುಗಳ ಮುಖಾಮುಖಿ ಡಿಕ್ಕಿ: ಗಾಯ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2025, 7:09 IST
Last Updated 25 ಆಗಸ್ಟ್ 2025, 7:09 IST
ನಾಪೋಕ್ಲು- ಮೂರ್ನಾಡು ಮುಖ್ಯರಸ್ತೆಯ ಹೊದವಾಡ ಗ್ರಾಮದ ಬಳಿ ಬೊಳಿಬಾಣೆ ಎಂಬಲ್ಲಿ ಭಾನುವಾರ ಮಧ್ಯಾಹ್ನ ಡಿಕ್ಕಿಯಾಗಿ ಜಖಂಗೊಂಡ ಕಾರು.
ನಾಪೋಕ್ಲು- ಮೂರ್ನಾಡು ಮುಖ್ಯರಸ್ತೆಯ ಹೊದವಾಡ ಗ್ರಾಮದ ಬಳಿ ಬೊಳಿಬಾಣೆ ಎಂಬಲ್ಲಿ ಭಾನುವಾರ ಮಧ್ಯಾಹ್ನ ಡಿಕ್ಕಿಯಾಗಿ ಜಖಂಗೊಂಡ ಕಾರು.   

ನಾಪೋಕ್ಲು: ಎರಡು ಕಾರುಗಳು ನಡುವೆ ಭಾನುವಾರ ಮಧ್ಯಾಹ್ನ ಮುಖಾಮುಖಿ ಡಿಕ್ಕಿ ಸಂಭವಿಸಿ ಪ್ರಯಾಣಿಕರು ಗಾಯಗೊಂಡ ಘಟನೆ ನಾಪೋಕ್ಲು- ಮೂರ್ನಾಡು ಮುಖ್ಯರಸ್ತೆಯ ಹೊದವಾಡ ಗ್ರಾಮದ ಬಳಿ ಬೊಳಿಬಾಣೆ ಎಂಬಲ್ಲಿ ಸಂಭವಿಸಿದೆ.

ಕೊಳಕೇರಿ ಗ್ರಾಮದ ಚಿತ್ರಭಾನು ಅವರು ಪತ್ನಿ ಹಾಗೂ ಮಗಳೊಂದಿಗೆ ಚಲಾಯಿಸುತ್ತಿದ್ದಾಗ ಅಭ್ಯತ್ ಅವರು ಸಂಚರಿಸುತ್ತಿದ್ದ ಕಾರಿಗೆ ಡಿಕ್ಕಿಯಾಗಿದೆ. ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯ ಪಿ.ಎ. ಮೊಹಮ್ಮದ್ ಹನೀಫ್ ಗಾಯಗೊಂಡ ಚಿತ್ರ ಭಾನು ಕುಟುಂಬದವರಿಗೆ ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಗೊಂಡ ಇತರ ಪ್ರಯಾಣಿಕರನ್ನು ಮಡಿಕೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.