
ಮಡಿಕೇರಿ: ಚೆಪ್ಪುಡಿರ ತಂಡವು ತಾಲ್ಲೂಕಿನ ಮೂರ್ನಾಡು ಗ್ರಾಮದಲ್ಲಿ ನಡೆದ ‘ಲೆವಿಸ್ಟಾ ಕೊಡವ ಕೌಟುಂಬಿಕ ಹಾಕಿ ಚಾಂಪಿಯನ್ಸ್ ಟ್ರೋಫಿ’ ಟೂರ್ನಿಯಲ್ಲಿ ಚೊಚ್ಚಲ ಪ್ರಶಸ್ತಿ ಎತ್ತಿಹಿಡಿಯಿತು.
ಫೈನಲ್ ಪಂದ್ಯದಲ್ಲಿ ಚೆಪ್ಪುಡಿರ 1–0 ಅಂತರದಿಂದ ಕುಲ್ಲೇಟಿರ ತಂಡವನ್ನು ಮಣಿಸಿತು. ವಿಜೇತ ತಂಡದ ಪರ ಸೋಮಣ್ಣ ಒಂದು ಗೋಲು ಗಳಿಸಿದರು.
ವಿಜೇತ ತಂಡಕ್ಕೆ ₹ 2 ಲಕ್ಷ, ದ್ವಿತೀಯ ಸ್ಥಾನ ಪಡೆದ ಕುಲ್ಲೇಟಿರ ತಂಡಕ್ಕೆ ₹ 1 ಲಕ್ಷ, ಸೆಮಿಫೈನಲ್ಸ್ ಪ್ರವೇಶಿಸಿದ ಮಂಡೇಪಂಡ ಮತ್ತು ಕುಪ್ಪಂಡ ತಂಡಗಳಿಗೆ ತಲಾ ₹ 50 ಸಾವಿರ ಹಾಗೂ ಟೂರ್ನಿಯಲ್ಲಿ ಆಡಿದ ಎಲ್ಲ ತಂಡಗಳಿಗೂ ತಲಾ ₹ 25 ಸಾವಿರ ಬಹುಮಾನ ನೀಡಲಾಯಿತು.
ಕೊಡವ ಹಾಕಿ ಅಕಾಡೆಮಿಯು ಹಾಕಿ ಕೂರ್ಗ್, ಎಂ.ಬಾಡಗ ಸ್ಪೋರ್ಟ್ಸ್ ರಿಕ್ರಿಯೇಷನ್ ಸಂಸ್ಥೆ ಮತ್ತು ಮೂರ್ನಾಡು ವಿದ್ಯಾಸಂಸ್ಥೆಯ ಸಹಯೋಗದಲ್ಲಿ ಟೂರ್ನಿ ಆಯೋಜಿಸಿತ್ತು. ಕಳೆದ 25 ವರ್ಷಗಳ ಕಾಲ ನಡೆದ ಕೊಡವ ಕೌಟುಂಬಿಕ ಹಾಕಿ ಟೂರ್ನಿಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ತಂಡಗಳು ಈ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.