ADVERTISEMENT

ಬಾಲ್ಯವಿವಾಹ, ಬಾಲಕಾರ್ಮಿಕ ಪ್ರಕರಣ; ವಿಶೇಷ ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2025, 15:26 IST
Last Updated 6 ಜೂನ್ 2025, 15:26 IST
ಮಡಿಕೇರಿಯಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಶುಕ್ರವಾರ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಭಾಗವಹಿಸಿದ್ದರು
ಮಡಿಕೇರಿಯಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಶುಕ್ರವಾರ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಭಾಗವಹಿಸಿದ್ದರು   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪ್ರಕರಣಗಳ ಮೇಲೆ ಅತೀವ ನಿಗಾ ಇರಿಸಬೇಕು. ಈ ಮೂಲಕ ಬಾಲಕ, ಬಾಲಕಿಯರನ್ನು ರಕ್ಷಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು. ಜೊತೆಗೆ, ಸರ್ಕಾರದ ಸೂಚನೆಯೂ ಇದೇ ಆಗಿದ್ದು, ಈ ನಿಟ್ಟಿನಲ್ಲಿ ವಿಶೇಷ ಗಮನ ಹರಿಸಬೇಕು ಎಂದು ನಿರ್ದೇಶನ ನೀಡಿದರು. ಇದೇ ವೇಳೆ ಅವರು ವಿವಿಧ ಅಭಿವೃದ್ಧಿ ಕಾರ್ಯಗಳು ಹಾಗೂ ಪ್ರಗತಿ ಬಗ್ಗೆ ಮಾಹಿತಿ ಪಡೆದುಕೊಂಡರು.

ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪ್ರಕರಣಗಳು ನಡೆಯಬಾರದು ಎಂದರೆ ಮುಖ್ಯವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಅದಕ್ಕಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಹಾಕಿಕೊಂಡು, ಜನಸಾಮಾನ್ಯರಲ್ಲಿ ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿ ತಪ್ಪು ಎಂಬ ಭಾವನೆ ಬರುವಂತೆ ಮಾಡಬೇಕು ಎಂದರು.

ADVERTISEMENT

ಸಮಾಜ ಕಲ್ಯಾಣ, ಸಮಗ್ರ ಗಿರಿಜನ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ವಸತಿ ಶಾಲೆಗಳು ಸೇರಿದಂತೆ ವಿವಿಧ ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಸ್ವಚ್ಛತೆಯ ಕಡೆಗೆ ಹೆಚ್ಚಿನ ಗಮನ ನೀಡಬೇಕು. ಆಹಾರ ಗುಣಮಟ್ಟವನ್ನು ಪ್ರತೀನಿತ್ಯವೂ ಕಾಯ್ದುಕೊಳ್ಳಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ಉತ್ತಮ ಬೆಡ್‍ಶೀಟ್ ಒದಗಿಸಬೇಕು ಎಂದು ಹೇಳಿದರು.

ಅಂಗನವಾಡಿ, ಶಾಲಾ ಹಾಗೂ ಕಾಲೇಜುಗಳ ಕಟ್ಟಡಗಳ ಬಗ್ಗೆ ವಿಶೇಷ ಗಮನ ಹರಿಸಬೇಕು. ಸಮಸ್ಯೆಗಳಿದ್ದಲ್ಲಿ ಮಾಹಿತಿ ನೀಡಬೇಕು ಎಂದು ಅವರು ಸೂಚಿಸಿದರು.

ಜಿಲ್ಲೆಯಲ್ಲಿ ಕೆರೆಗಳ ಸಂರಕ್ಷಣೆ ಮಾಡಬೇಕು. ಕೆರೆ ಸಂರಕ್ಷಣೆಯಿಂದ ಕಾಲ ಕಾಲಕ್ಕೆ ಮಳೆ ಆಗಲಿದೆ. ಜೊತೆಗೆ ಅಂತರ್ಜಲ ಮಟ್ಟ ಹೆಚ್ಚಲಿದೆ ಎಂದು ತಿಳಿಸಿದರು.

ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ. ಆ ನಿಟ್ಟಿನಲ್ಲಿ ಶಾಲೆಗಳಲ್ಲಿ ಆಟದ ಮೈದಾನ, ಶೌಚಾಲಯ, ಕಡ್ಡಾಯವಾಗಿ ಇರಬೇಕು ಎಂದರು.

ಗ್ರಾಮ ಸಭೆಗಳಿಗೆ ನೋಡಲ್ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಿ ಸಭೆ ನಡೆಸಿ ಪ್ರಗತಿಯತ್ತ ಗಮನ ಹರಿಸಬೇಕು. ಗ್ರಾಮದ ಆಡಳಿತ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತಷ್ಟು ಹೆಚ್ಚಿನ ಕೆಲಸ ನಿರ್ವಹಣೆ ಮಾಡಬೇಕು ಎಂದರು.

ಜೂನ್ 12ರಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ, ಹಾಗೆಯೇ ಜೂನ್ 21ರಂದು ಅಂತರರಾಷ್ಟ್ರೀಯ 11 ನೇ ಯೋಗ ದಿನಾಚರಣೆ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ಪಡೆದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯಲ್ಲಿ ನಡೆಯುವ ವಿವಿಧ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ನೀಡಿದರು.

ಕುಡಿಯುವ ನೀರು, ಗ್ರಾಮೀಣ ರಸ್ತೆ ಅಭಿವೃದ್ಧಿ, ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತಿತರ ಯೋಜನೆಗಳ ಕುರಿತು ವಿವರಿಸಿದರು.

ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಪ್ಪ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ, ಪಶುಪಾಲನೆ ಇಲಾಖೆ ಉಪನಿರ್ದೇಶಕ ಲಿಂಗರಾಜ ದೊಡ್ಡಮನಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ತಿಪ್ಪಣ್ಣ ಪಿ. ಸಿರಸಗಿ, ಮಕ್ಕಳ ರಕ್ಷಣಾಧಿಕಾರಿ ಬಿ.ಈರಸ್ವಾಮಿ, ಕಾರ್ಮಿಕ ಅಧಿಕಾರಿ ಟಿ.ಕಾವೇರಿ, ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಶಿರಾಜ್ ಅಹ್ಮದ್, ಜಿಲ್ಲಾ ಪಂಚಾಯಿತಿ ಎಂಜಿನಿಯರ್ ನಾಯಕ್, ಭಾಸ್ಕರ್, ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕುಮಾರಸ್ವಾಮಿ, ತಾಲ್ಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಪ್ಪಣ್ಣ, ತಹಶೀಲ್ದಾರರಾದ ಪ್ರವೀಣ್ ಕುಮಾರ್, ಕೃಷ್ಣಮೂರ್ತಿ, ಕಿರಣ್ ಗೌರಯ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪಾಲ್, ನೆಹರು, ಜಿಲ್ಲಾ ಆಯುಷ್ ಅಧಿಕಾರಿ ಶೈಲಜಾ, ಅರುಣ್, ಇತರರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.

ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು
ಮಡಿಕೇರಿಯಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಶುಕ್ರವಾರ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಭಾಗವಹಿಸಿದ್ದರು
ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು
ಮಡಿಕೇರಿಯಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಶುಕ್ರವಾರ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು

‘ಅಧಿಕಾರಿಗಳು ಕೇಂದ್ರ ಸ್ಥಾನ ಬಿಟ್ಟು ಹೋಗುವಂತಿಲ್ಲ’

ಮಳೆಗಾಲದ ಸಂದರ್ಭದಲ್ಲಿ ಅಧಿಕಾರಿಗಳು ರಜೆ ಇದೆ ಎಂದು ಕೇಂದ್ರ ಸ್ಥಾನ ಬಿಟ್ಟು ಹೋಗುವಂತಿಲ್ಲ. ಪ್ರಾಕೃತಿಕ ವಿಕೋಪ ನಿರ್ವಹಣೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.