ADVERTISEMENT

ನಿರಂತರ ಮಳೆ: ನಾಳೆ ಕೊಡಗಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2024, 8:49 IST
Last Updated 1 ಆಗಸ್ಟ್ 2024, 8:49 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ನಿರಂತರವಾಗಿ ಮುಂದುವರೆದಿರುವಂತೆಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 2ರಂದು ಜಿಲ್ಲೆಗೆ ಭೇಟಿ ನೀಡಿ ಮಳೆಹಾನಿ ಪ್ರದೇಶಗಳನ್ನು ವೀಕ್ಷಿಸಲಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ವಿಮಾನದಲ್ಲಿ ಬಂದು ಅಲ್ಲಿಂದ ರಸ್ತೆ ಮಾರ್ಗದಲ್ಲಿ ಶ್ರೀಮಂಗಲ ತಲುಪಿ, ಕುಟ್ಟ–ಕೇರಳ ಹೆದ್ದಾರಿ ಕುಸಿದ ಪ್ರದೇಶವನ್ನು ವೀಕ್ಷಿಸಲಿದ್ದಾರೆ. ಬಳಿಕ ಪ್ರವಾಹಪೀಡಿತ ಪ್ರದೇಶಗಳಾದ ವಿರಾಜಪೇಟೆಯ ಕೆದಮುಳ್ಳೂರು, ಸಿದ್ದಾಪುರವನ್ನು ವೀಕ್ಷಿಸಿ, ಸ್ವರ್ಣಮಾಲಾ ಕಲ್ಯಾಣಮಂಟಪದಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡುವರು.

ನಂತರ ಕುಶಾಲನಗರದ ಮಾದಾಪಟ್ಟಣ ಸೇರಿದಂತೆ ಮಳೆ ಹಾನಿ‌ಪ್ರದೇಶಗಳನ್ನು ವೀಕ್ಷಿಸಲಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.