ADVERTISEMENT

ವಿದ್ಯುತ್ ಸ್ಪರ್ಶ: ಕಾಫಿ ಬೆಳೆಗಾರ ಸಾವು

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2026, 7:51 IST
Last Updated 12 ಫೆಬ್ರುವರಿ 2026, 7:51 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಸಿದ್ದಾಪುರ: ಕಾಫಿ ತೋಟದಲ್ಲಿ ನೀರು ಹಾಯಿಸಲು ಸ್ಪಿಂಕ್ಲರ್ ಪೈಪ್ ಜೋಡಣೆ ಮಾಡುತ್ತಿರುವ ಸಂದರ್ಭ ವಿದ್ಯುತ್ ಸ್ಪರ್ಶಿಸಿ ಕಾಫಿ ಬೆಳೆಗಾರರಾದ ಹಾಲುಗುಂದ ಗ್ರಾಮದ ನಿವಾಸಿ ಜಿಮ್ಮ (68) ಬುಧವಾರ ಸಂಜೆ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ADVERTISEMENT

ಕಾಫಿ ತೋಟದ ಒಳಗೆ ಹಾದುಹೋಗಿದ್ದ 11 ಕೆ.ವಿ ವಿದ್ಯುತ್ ತಂತಿ ಸ್ಪ್ರಿಂಕ್ಲರ್ ಪೈಪಿಗೆ ತಗುಲಿದ್ದು, ಜಿಮ್ಮಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡುವಂತೆ ಸ್ಥಳೀಯರು ಒತ್ತಾಯಿಸಿದರು.

ಸಿದ್ಧಾಪುರ ಪೊಲೀಸರು ಪ್ರಕರಣದ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.