ಮಡಿಕೇರಿ: ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ‘ಎಸ್ ಟು ಎಕ್ಸಸ್’ ಎಂಬ ಮೊಬೈಲ್ ಆ್ಯಪ್ ಅನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಬುಧವಾರ ಬಿಡುಗಡೆ ಮಾಡಿದರು.
ಸುಗಮ್ಯ ಯಾತ್ರಾ ಕಾರ್ಯಕ್ರಮದಡಿ ಎಲ್ಲಾ ಸರ್ಕಾರಿ ಕಚೇರಿಗಳು, ಸಾರ್ವಜನಿಕ ಸ್ಥಳಗಳು, ಉದ್ಯಾನಗಳು, ಗ್ರಂಥಾಲಯಗಳು, ಪ್ರವಾಸಿತಾಣಗಳಲ್ಲಿ ಅಡೆತಡೆ ರಹಿತ ವಾತಾವರಣ ಒಳಗೊಂಡಿರುವ ಮಾಹಿತಿಯನ್ನು ಕಲೆಹಾಕಿ ವಿಶೇಷ ಚೇತನ ಸ್ನೇಹಿ ವಾತಾವರಣ ಇರುವ ಬಗ್ಗೆ ಸೋಶಿಯಲ್ ಆಡಿಟ್ ಮಾಡಲು ಈ ಮೊಬೈಲ್ ಆ್ಯಪ್‍ನ್ನು ಅಭಿವೃದ್ಧಿ ಪಡಿಸಲಾಗಿದೆ.
ಈ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ್ ನರ್ವಡೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕೆ.ಜಿ.ವಿಮಲ, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್‍ನ ಕಾರ್ಯಕ್ರಮ ವ್ಯವಸ್ಥಾಪಕರಾದ ಅಂಕಾಚಾರಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.