ಮಡಿಕೇರಿ: ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಬುಧವಾರ ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿಯ ಚರಂಡಿಗೆ ಇಳಿದು ಕಸ ತೆಗೆದರು.
ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್ ಕರೆ ನೀಡಿದ್ದ ‘ಸ್ವಚ್ಛ ಕೊಡಗು - ಸುಂದರ ಕೊಡಗು’ ಅಭಿಯಾನದಲ್ಲಿ ಭಾಗಿಯಾದ ಅವರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿದರು.
ಇವರೊಂದಿಗೆ ಶಾಸಕ ಡಾ.ಮಂತರ್‌ಗೌಡ ಸಹ ಕಸ ಗುಡಿಸಿ ಗಮನ ಸೆಳೆದರು. ಕೊಡಗು ಜಿಲ್ಲೆಯ ವಿವಿಧೆಡೆ 320ಕ್ಕೂ ಅಧಿಕ ಸಂಘಟನೆಗಳು, ಸಂಘ, ಸಂಸ್ಥೆಗಳು ಏಕಕಾಲದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.