ಪ್ರಾತಿನಿಧಿಕ ಚಿತ್ರ
ಸೋಮವಾರಪೇಟೆ: ‘ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಸುಮಾರು 13 ಗ್ರಾಮಗಳ ಕೃಷಿ ಭೂಮಿಯನ್ನು ಈ ಹಿಂದೆ ಬಿಜೆಪಿ ಸರ್ಕಾರ ಕೈಗಾರಿಕಾ ಉದ್ದೇಶಕ್ಕೆ ಕಾಪೋರೇಟ್ ನವರಿಗೆ ನೀಡಲು ಮುಂದಾದಾಗ ವಿರೋಧಿಸಿದ್ದ ಕಾಂಗ್ರೆಸ್ ಇಂದು ಅದೇ ಕೆಲಸವನ್ನು ಮಾಡಲು ಮುಂದಾಗಿದೆ’ ಎಂದು ಅಖಿಲ ಭಾರತ ಯುನೈಟೆಡ್ ಕಿಸಾನ್ ಸಭಾದ ಕೊಡಗು ಜಿಲ್ಲಾ ಸಮಿತಿ ಆರೋಪಿಸಿದೆ.
‘3 ವರ್ಷಗಳಿಂದ ಭೂಮಿ ಉಳಿಸಿಕೊಳ್ಳಲು ರೈತರು ಹೋರಾಟ ನಡೆಸುತ್ತಿದ್ದಾರೆ. ಕಾಂಗ್ರೆಸ್ ವಿರೋಧ ಪಕ್ಷದಲ್ಲಿದ್ದಾಗ ರೈತರಿಗೆ ಧೈರ್ಯ ತುಂಬಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ರೈತರಿಂದ ಕೃಷಿ ಭೂಮಿ ಕಸಿಯಲು ಮುಂದಾಗಿದ್ದಾರೆ. ಜೂ.25ರಂದು ನಡೆದ ಪ್ರತಿಭಟನೆ ಸಂದರ್ಭ ಸಂದರ್ಭ 500ಕ್ಕೂ ಹೆಚ್ಚು ಹೋರಾಟಗಾರರನ್ನು ಬಂಧಿಸಲಾಗಿದೆ. ಬಂಧಿತರನ್ನು ಬಿಡುಗಡೆ ಮಾಡಬೇಕು. ರೈತರಿಂದ ಕೃಷಿ ಭೂಮಿಯನ್ನು ಕಿತ್ತುಕೊಳ್ಳಬಾರದು’ ಎಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ಡಿ.ಎಸ್. ನಿರ್ವಾಣಪ್ಪ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.