ADVERTISEMENT

ಮಡಿಕೇರಿ: ಎ.ಸಿ ನೋಟಿಸ್‌ಗೆ ಖಂಡನೆ, ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2023, 6:22 IST
Last Updated 3 ಫೆಬ್ರುವರಿ 2023, 6:22 IST
ಮಡಿಕೇರಿ ನಗರಸಭೆಯ ನಾಮನಿರ್ದೇಶಿತ ಸದಸ್ಯ ಕವನ್ ಕಾವೇರಪ್ಪ ಸೇರಿದಂತೆ ಹಿಂದೂ ಜಾಗರಣಾ ವೇದಿಕೆಯ ಸದಸ್ಯರಿಗೆ ಉಪವಿಭಾಗಾಧಿಕಾರಿಗಳು ಗಡಿಪಾರು ಮಾಡುವ ಕುರಿತು ನೋಟಿಸ್‌ ನೀಡಿರುವುದನ್ನು ಖಂಡಿಸಿರುವ ವೇದಿಕೆಯ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಮಡಿಕೇರಿ: ನಗರಸಭೆಯ ನಾಮನಿರ್ದೇ ಶಿತ ಸದಸ್ಯ ಕವನ್ ಕಾವೇರಪ್ಪ ಸೇರಿದಂತೆ ಹಿಂದೂ ಜಾಗರಣಾ ವೇದಿಕೆಯ ಸದಸ್ಯರಿಗೆ ಉಪವಿಭಾಗಾಧಿಕಾರಿಗಳು ಗಡಿಪಾರು ಮಾಡುವ ಕುರಿತು ನೋಟಿಸ್‌ ನೀಡಿರುವುದನ್ನು ಖಂಡಿಸಿರುವ ವೇದಿಕೆಯ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

‘ಇವರು ಯಾವುದೇ ಗಂಭೀರವಾದ ಪ್ರಕರಣಗಳಲ್ಲಿ ಭಾಗಿಯಾಗದೇ ಇದ್ದರೂ ಅವರನ್ನು ಗಡಿಪಾರು ಮಾಡುವ ಕುರಿತು ನೋಟಿಸ್ ನೀಡಿರುವುದು ಸರಿಯಲ್ಲ’ ಎಂದು ಕಾರ್ಯಕರ್ತರು ಟೀಕಿಸಿದರು.

ಹಿಂದೂಗಳನ್ನು ವ್ಯವಸ್ಥಿತವಾಗಿ ತುಳಿಯುವ ಕೆಲಸವನ್ನು ಅಧಿಕಾರಿಗಳ ವೃಂದ ಮಾಡುತ್ತಿದೆ ಎಂದೂ ಆರೋಪಿಸಿದರು.

ADVERTISEMENT

ವಿಚಾರಣೆ ಮುಂದಕ್ಕೆ: ‘ಚುನಾವಣೆಗೆ ಸಂಬಂಧಿಸಿದಂತೆ ಪೊಲೀಸ್‌ ಇಲಾಖೆಯು ಒಟ್ಟು 5 ಮಂದಿಯನ್ನು ಗಡಿಪಾರು ಮಾಡಬೇಕು ಎಂಬ ಪ್ರಸ್ತಾವ ಸಲ್ಲಿಸಿತ್ತು. ಅದರಂತೆ, ಎಲ್ಲರಿಗೂ ನೋಟಿಸ್ ನೀಡಲಾಗಿತ್ತು. ಅವರಲ್ಲಿ ಕೆಲವರು ಖುದ್ದಾಗಿ, ಕೆಲವರು ವಕೀಲರ ಮೂಲಕ ಹಾಜರಾಗಿ ಸಮಯ ಕೇಳಿದ್ದಾರೆ. ವಿಚಾರಣೆಯನ್ನು ಮುಂದೂಡಲಾಗಿದೆ’ ಎಂದು ಉಪವಿಭಾಗಾಧಿಕಾರಿ ಕಚೇರಿಯ ಮೂಲಗಳು ತಿಳಿಸಿವೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.