ADVERTISEMENT

‘ಭಾರತದ ಮಹಿಳೆಯರ ಸ್ಥಿತಿಗತಿಗಳು 2014-2024’ ಪುಸ್ತಕ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2024, 13:40 IST
Last Updated 21 ಏಪ್ರಿಲ್ 2024, 13:40 IST
‘ಭಾರತದ ಮಹಿಳೆಯರ ಸ್ಥಿತಿಗತಿಗಳು’ ಎಂಬ ಪುಸ್ತಕವನ್ನು ಸಿದ್ದಾಪುರದಲ್ಲಿ ಬಿಡುಗಡೆಗೊಳಿಸಲಾಯಿತು. ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಪಾಲ್ಗೊಂಡಿದ್ದರು
‘ಭಾರತದ ಮಹಿಳೆಯರ ಸ್ಥಿತಿಗತಿಗಳು’ ಎಂಬ ಪುಸ್ತಕವನ್ನು ಸಿದ್ದಾಪುರದಲ್ಲಿ ಬಿಡುಗಡೆಗೊಳಿಸಲಾಯಿತು. ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಪಾಲ್ಗೊಂಡಿದ್ದರು   

ಸಿದ್ದಾಪುರ: ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ವತಿಯಿಂದ ‘ಭಾರತದ ಮಹಿಳೆಯರ ಸ್ಥಿತಿಗತಿಗಳು 2014-2024’ ಪುಸ್ತಕವನ್ನು ಸಿದ್ದಾಪುರದಲ್ಲಿ ಬಿಡುಗಡೆಗೊಳಿಸಲಾಯಿತು.

ಸಿದ್ದಾಪುರದ ಸಿ.ಪಿ.ಐ (ಎಂ) ಕಚೇರಿಯಲ್ಲಿ ಪುಸ್ತಕವನ್ನು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಬಿಡುಗಡೆಗೊಳಿಸಿ ಮಾತನಾಡಿದರು. ಕಳೆದ 10 ವರ್ಷಗಳಲ್ಲಿ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿ.ಜೆ.ಪಿ ಸರ್ಕಾರ ಅವಧಿಯಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಹೆಚ್ಚಾಗಿದೆ ಎಂದರು.

10 ವರ್ಷಗಳಲ್ಲಿ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ. ನಿರುದ್ಯೋಗ ಹೆಚ್ಚಾಗಿದ್ದು, ಯಾವುದೇ ಭರವಸೆಯನ್ನು ಈಡೇರಿಸಿಲ್ಲ ಎಂದು ಆರೋಪಿಸಿದರು. ಈ ಬಗ್ಗೆ ಗ್ರಾಮ ಗ್ರಾಮಗಳಲ್ಲಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ADVERTISEMENT

ಸಂಘಟನೆಯ ಜಿಲ್ಲಾ ಸಂಚಾಲಕಿ ಪದ್ಮಿನಿ, ಪದಾಧಿಕಾರಗಳಾದ ಪ್ರೇಮಾ, ಲಕ್ಷ್ಮಿ, ಮುತ್ತು, ರಾಧಾ, ಧಮಯಂತಿ, ರತ್ನ, ಕಮಲ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.