ಮಡಿಕೇರಿ: ಇಲ್ಲಿನ ಕೊಡವ ಸಮಾಜದ ಅಂಗಳದಲ್ಲಿ ಬುಧವಾರ ಕೊಡಗು ಜಿಲ್ಲಾ ಕೈಗಾರಿಕಾ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಸಿ.ವಿ.ನಾಗೇಶ್ ಅವರು ‘ಕಾವೇರಿ ವಸ್ತ್ರಸಿರಿ’ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ನೀಡಿದರು.
ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜನೆಯಾಗಿರುವ ಈ ಮೇಳದಲ್ಲಿ 25ಕ್ಕೂ ಹೆಚ್ಚು ಮಳಿಗೆಗಳಿದ್ದು, ಫೆ. 11ರವರೆಗೂ ಇರಲಿದೆ.
ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್.ಗುರುಸ್ವಾಮಿ, ಕೈಗಾರಿಕೆ ಇಲಾಕೆಯ ಉಪ ನಿರ್ದೇಶಕ ರಘು, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಲಿಂಗರಾಜ ದೊಡ್ಡಮನಿ, ಖಾದಿ ಮಂಡಳಿ ಅಧಿಕಾರಿ ಎಚ್.ಆರ್.ರಾಮಕೃಷ್ಣ, ಕೈಮಗ್ಗ ಸಹಕಾರ ಸಂಘದ ಕಾರ್ಯದರ್ಶಿ ಸವಿತಾ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.