ADVERTISEMENT

ರಾಜ್ಯದಲ್ಲಿ ಭಂಡ ಸರ್ಕಾರ ಆಡಳಿತ ನಡೆಸುತ್ತಿದೆ: ರಮಾನಾಥ ರೈ ಕಿಡಿ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2020, 10:23 IST
Last Updated 1 ಆಗಸ್ಟ್ 2020, 10:23 IST
ಮಾಜಿ ಸಚಿವ ರಮಾನಾಥ ರೈ ಮತ್ತು ಮಾಜಿ ಸಂಸದ ಧ್ರುವನಾರಾಯಣ್‌ ಸೇರಿ ಇತರರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮಾಜಿ ಸಚಿವ ರಮಾನಾಥ ರೈ ಮತ್ತು ಮಾಜಿ ಸಂಸದ ಧ್ರುವನಾರಾಯಣ್‌ ಸೇರಿ ಇತರರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.   

ಮಡಿಕೇರಿ: ‘ರಾಜ್ಯದಲ್ಲಿ ಭಂಡ ಸರ್ಕಾರ ಆಡಳಿತ ನಡೆಸುತ್ತಿದೆ’ ಎಂದು ಮಾಜಿ ಸಚಿವ ರಮಾನಾಥ ರೈ ಇಲ್ಲಿ ಶನಿವಾರ ಕಿಡಿಕಾರಿದರು.

‘ವೈದ್ಯಕೀಯ ಉಪಕರಣ ಖರೀದಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಬಂದರೂ ತನಿಖೆ ನಡೆಸುತ್ತಿಲ್ಲ. ಅಧಿಕಾರಕ್ಕೆ ಬಿಜೆಪಿಯುವರು ಏನು ಬೇಕಾದರೂ ಮಾಡಲು ಸಿದ್ಧರಿದ್ದಾರೆ. ಇವರಿಗೆ ಜನಹಿತ ಬೇಕಿಲ್ಲ. ಕೋವಿಡ್‌ ಹೆಸರಿನಲ್ಲಿ ದುಡ್ಡು ಹೊಡೆದಿರುವ ಸರ್ಕಾರದ ವಿರುದ್ದ ನಮ್ಮ ಹೋರಾಟ ನಡೆಯುತ್ತಿದೆ. ಪ್ರತಿ ಗ್ರಾಮಕ್ಕೂ ತೆರಳಿ ಸರ್ಕಾರದ ಭ್ರಷ್ಟಾಚಾರದ ಮಾಹಿತಿ ನೀಡುತ್ತೇವೆ’ ಎಂದು ಹೇಳಿದರು.

‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೇ ಖರೀದಿಗೆ ಅನುಮತಿ ಕೊಟ್ಟಿದ್ದಾರೆ. ಈಗ ಅವರು ಯಾವುದಕ್ಕೂ ಸ್ಪಷ್ಟನೆ ಕೊಡುತ್ತಿಲ್ಲ. ದುಡ್ಡು ತಿಂದವರೇ ಮಾತನಾಡಲಿ ಎಂದು ಯಡಿಯೂರಪ್ಪ ಮೌನವಾಗಿರಬಹುದು’ ಎಂದು ರೈ ಕುಟುಕಿದರು.

ADVERTISEMENT

‘ಮುಖ್ಯಮಂತ್ರಿ ಮೌನ ಸಂಶಯ ಮೂಡಿಸಿದೆ. ಆದ್ದರಿಂದ, ಹೈಕೋರ್ಟ್‌ ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಬೇಕು. ಸರ್ಕಾರದ ವಿರುದ್ಧ ಆರೋಪಿಸಿದರೆ ಪಕ್ಷದಿಂದ ಲೀಗಲ್‌ ನೋಟಿಸ್‌ ನೀಡಿ ರಾಜ್ಯದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸಲಾಗುತ್ತಿದೆ’ ಎಂದು ಮಾಜಿ ಸಂಸದ ಧ್ರುವನಾರಾಯಣ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.