ADVERTISEMENT

ಮಡಿಕೇರಿ: ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಾಪ ಸಿಂಹ ಪ್ರತಿಕೃತಿ ದಹಿಸಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2025, 7:52 IST
Last Updated 6 ಏಪ್ರಿಲ್ 2025, 7:52 IST
<div class="paragraphs"><p>ಪ್ರತಿಕೃತಿ ದಹಿಸಿದ ಕಾಂಗ್ರೆಸ್‌ ಕಾರ್ಯಕರ್ತರು</p></div>

ಪ್ರತಿಕೃತಿ ದಹಿಸಿದ ಕಾಂಗ್ರೆಸ್‌ ಕಾರ್ಯಕರ್ತರು

   

ಮಡಿಕೇರಿ: ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕೊಡಗಿನ ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರಿಗೆ ಬೆಂಬಲ ವ್ಯಕ್ತಪಡಿಸಿ ನಗರದಲ್ಲಿ ಪ್ರತಿಭಟನಾ ಜಾಥಾ ನಡೆಸಿದರು.

ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಅನಗತ್ಯವಾಗಿ ಕಾಂಗ್ರೆಸ್ ಶಾಸಕರ ಹೆಸರನ್ನು ಬಿಜೆಪಿ ಎಳೆದು ತರಲಾಗುತ್ತಿದೆ ಎಂದು ಆರೋಪಿಸಿದರು.

ADVERTISEMENT

ಗಾಂಧಿ ಮೈದಾನದಿಂದ ಪ್ರತಿಭಟನಾ ಜಾಥಾ ಹೊರಟ ಪ್ರತಿಭಟನಾಕಾರರು ಬಿಜೆಪಿ ಮುಖಂಡ ಪ್ರತಾಪ ಸಿಂಹ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ನಂತರ ಗಾಂಧಿ ಮೈದಾನಕ್ಕೆ ಬಂದ ಅವರು ವಿನಯ್ ಸೋಮಯ್ಯ ಅವರ ಸಾವಿಗೆ ಮೌನಾಚರಣೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.