ADVERTISEMENT

ಹಲ್ಲೆ ಮಾಡಿ ಚಿನ್ನಾಭರಣ ಕಸಿದಿದ್ದ ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2025, 5:43 IST
Last Updated 10 ಏಪ್ರಿಲ್ 2025, 5:43 IST

ಮಡಿಕೇರಿ: ಇಲ್ಲಿನ ಕಾಲೇಜ್ ರಸ್ತೆಯ ನಿವಾಸಿ ಸಾಕಮ್ಮ ಅವರ ಮನೆಗೆ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ಕಸಿದುಕೊಂಡು ಹೋಗಿದ್ದ ಅಪರಾಧಿ ರಾಜಸ್ತಾನದ ವಿಕಾಸ್ ಜೋರ್ಡಿಯಾ (35) ಎಂಬಾತನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯವು 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಅಪರಾಧಿಯು 2023ರ ನವೆಂಬರ್ 6ರಂದು ಸಾಕಮ್ಮ ಅವರು ತಮ್ಮ ಮನೆಯಲ್ಲಿ ಒಬ್ಬರೇ ಇದ್ದ ವೇಳೆಯಲ್ಲಿ ನುಗ್ಗಿ ಹಲ್ಲೆ ಮಾಡಿ, ತಲೆಗೆ ಗಾಯ ಮಾಡಿ, ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣ ಸರ ಮತ್ತು ಕೈಬೆರಳಿನಲ್ಲಿದ್ದ ಚಿನ್ನದ ಉಂಗುರವನ್ನು ಕಸಿದುಕೊಂಡು ಪರಾರಿಯಾಗಿದ್ದ.

ದೂರು ದಾಖಲಿಸಿಕೊಂಡ ಸಿಪಿಐ ಪಿ.ಅನೂಪ್‌ ಮಾದಪ್ಪ, ಕಾನ್‌ಸ್ಟೆಬಲ್‌ಗಳಾದ ಎ.ವಿ.ಕಿರಣ್, ಡಿ.ಎಚ್.ಸುಮಿತಾ ಮರುದಿನವೇ ಈತನನ್ನು ಬಂಧಿಸಿ, ನಂತರ ನ್ಯಾಯಾಲಯಕ್ಕೆ ದೋಷರೋಪ ಪಟ್ಟಿ ಸಲ್ಲಿಸಿದ್ದರು.

ADVERTISEMENT

ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜಿ.ಪ್ರಶಾಂತಿ ಅವರು ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ₹ 15 ಸಾವಿರ ದಂಡ ವಿಧಿಸಿದರು. ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಎನ್.ಪಿ.ದೇವೇಂದ್ರ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.