ADVERTISEMENT

ಕೊಡಗಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 4 ಮೇ 2022, 11:24 IST
Last Updated 4 ಮೇ 2022, 11:24 IST
ಆಲಿಕಲ್ಲು ಸಹಿತ ಧಾರಾಕಾರ ಮಳೆ
ಆಲಿಕಲ್ಲು ಸಹಿತ ಧಾರಾಕಾರ ಮಳೆ   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬುಧವಾರ ಆಲಿಕಲ್ಲು ಸಹಿತ ಧಾರಾಕಾರ ಮಳೆ ಸುರಿಯಿತು.

ಮಡಿಕೇರಿಯಲ್ಲಿ ಒಂದು ತಾಸು ಮಳೆ ಅಬ್ಬರಿಸಿತು. ಗುಡುಗು, ಸಿಡಿಲಿನ ಆರ್ಭಟ ಜೋರಾಗಿತ್ತು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ವ್ಯಾಪ್ತಿಯಲ್ಲಿ ದೊಡ್ಡಗಾತ್ರದ ಆಲಿಕಲ್ಲು ಬಿದ್ದಿದ್ದವು.

ಆಲಿಕಲ್ಲು ಬಿದ್ದ ಪರಿಣಾಮ ಕೆಲವು ಮನೆಯ ಹೆಂಚುಗಳಿಗೆ ಹಾನಿಯಾಗಿದೆ.

ADVERTISEMENT

ತಲಕಾವೇರಿ, ಭಾಗಮಂಡಲ ಭಾಗದಲ್ಲಿ ಮಂಗಳವಾರ ರಾತ್ರಿಯೂ ಧಾರಾಕಾರ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.