ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಮುದಾಯ ವೈದ್ಯಕೀಯ ವಿಭಾಗವು ಸೆ. 9 ಮತ್ತು 10ರಂದು ಆರೋಗ್ಯ ಸಂಶೋಧನೆಯಲ್ಲಿ ಗುಣಾತ್ಮಕ ವಿಧಾನಗಳು (ಕ್ವಾಲಿಟೇಟಿವ್ ಮೆತಡ್ಸ್ ಇನ್ ಹೆಲ್ತ್ ರಿಸರ್ಚ್) ಎಂಬ ವಿಷಯದ ಮೇಲೆ ಕಾರ್ಯಾಗಾರವನ್ನು ಆಯೋಜಿಸಿದೆ.
ಈ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ವೈದ್ಯಕೀಯ ಕಾಲೇಜುಗಳ ಮತ್ತು ನೆರೆ ರಾಜ್ಯಗಳ ವೈದ್ಯಕೀಯ ಸಂಸ್ಥೆಗಳಿಂದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಎಐಐಎಂಎಸ್), ಮಂಗಲಗಿರಿಯ ಡಾ.ಕಲೈಸೇಲ್ವನ್ ಹಾಗೂ ಮನಕುಲ ವಿನಾಯಗ್ ವೈದ್ಯಕೀಯ ಕಾಲೇಜು, ಪುದುಚೇರಿಯ ಡಾ.ರೀನಾ ಮೋಹನ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಲಿದ್ದಾರೆ.
ಈ ಕಾರ್ಯಾಗಾರವು ವೈದ್ಯಕೀಯ ಕ್ಷೇತ್ರದ ಸಂಶೋಧನೆಗೆ ಉತ್ತೇಜನ ನೀಡುವ ಉದ್ದೇಶದಿಂದ ಆಯೋಜಿಸಲಾಗಿದ್ದು, ವೈದ್ಯಕೀಯ ಅಧ್ಯಾಪಕರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಉಪಯುಕ್ತವಾಗಲಿದೆ. ಕಾರ್ಯಾಗಾರವು ಎರಡೂ ದಿನವೂ ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.