ಮಡಿಕೇರಿ: ವಿರಾಜಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಣ್ಣುವಂಡ ಶ್ರೀನಿವಾಸ್ ಚಂಗಪ್ಪ (60) ಅವರು ಕೋವಿಡ್‌ನಿಂದ ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ಮೈಸೂರು ಮಿತ್ರ ಪತ್ರಿಕೆಯ ತಿತಿಮತಿ ಭಾಗದ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಕಳೆದ ವಾರ ಅವರಿಗೆ ಕೋವಿಡ್ ದೃಢಪಟ್ಟಿತ್ತು. ತೀವ್ರ ಉಸಿರಾಟದ ತೊಂದರೆಗೆ ಒಳಗಾದ ಅವರನ್ನು ಮೈಸೂರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಂಗಪ್ಪ ಅವರ ನಿಧನಕ್ಕೆ ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಅಧ್ಯಕ್ಷೆ ಸವಿತಾ ರೈ ಅವರು ಸಂತಾಪ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.